ನವದೆಹಲಿ: ಅದಾನಿಯನ್ನು ಬಂಧಿಸಬೇಕಾದ ಕೇಂದ್ರ ಸರ್ಕಾರವೇ ಅವರ ಬೆಂಬಲಕ್ಕೆ ನಿಂತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಆರೋಪಿಸಿದರು. ಅದಾನಿಗೆ ಯುಎಸ್ ಕೋರ್ಟ್ ನಿಂದ ವಾರೆಂಟ್ ಜಾರಿ ವಿಚಾರವಾಗಿ ದೆಹಲಿಯಲ್ಲಿ ಮಾತನಾಡಿದ ಅವರು, ಗೌತಮ್ ಅದಾನಿಯನ್ನು ಕೇಂದ್ರ ಸರ್ಕಾರ ಬಂಧಿಸಬೇಕು. ಆದರೆ ಸ್ವತಃ ಪ್ರಧಾನಿ ಮೋದಿ, ಅಮಿತ್ ಶಾ ಅವರೇ ಅದಾನಿಯನ್ನ ರಕ್ಷಣೆ ಮಾಡುತ್ತಿದ್ದಾರೆ. ಈ ವಿಚಾರವನ್ನು ನಾವು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ಅದಾನಿ ಕಾನೂನು ಬಾಹಿರ ಕೆಲಸ ಮಾಡುತ್ತಾ, ಭ್ರಷ್ಟಾಚಾರ ಕೇಸ್ಲ್ಲಿ ಭಾಗಿಯಾಗಿದ್ದಾರೆ ಎಂದು ನಾವು ಅನೇಕ ವರ್ಷಗಳಿಂದ ಹೇಳುತ್ತಿದ್ದೇವೆ. ಆದರೆ ಮೋದಿ ಮಾತ್ರ ಇದರ ಬಗ್ಗೆ ಮಾತನಾಡುತ್ತಿಲ್ಲ. ಅಮಿತ್ ಶಾ ಕೈಯಲ್ಲೇ ಇಡಿ, ಸಿಬಿಐ ಇದೆ. ಆದರೂ ಸಹ ಯಾಕೆ ತನಿಖೆ ಮಾಡುತ್ತಿಲ್ಲ ಎಂದು ವಾಗ್ಧಾಳಿ ನಡೆಸಿದರು.
ಮುಡಾ ಹಗರಣ : ಕಡತ ನಾಪತ್ತೆ ಮಾಡಿದವರ ವಿರುದ್ಧ ಕಾನೂನು ಕ್ರಮವಾಗಲಿ – ದೂರುದಾರ ಸ್ನೇಹಮಯಿ ಕೃಷ್ಣ
ಹಿಂಡೆನ್ಬರ್ಗ್ ಸಂಶೋಧನಾ ವರದಿ ಪ್ರಕಟಿಸಿದಾಗ ಇದೆಲ್ಲ ಸುಳ್ಳು ಅಂದಿದ್ದರು. ಈಗ ವಿದೇಶದಲ್ಲಿ ಅಕ್ರಮದ ಬಗ್ಗೆ ಚರ್ಚೆ ಆಗುತ್ತಿದೆ. ಏರ್ಪೋರ್ಟ್, ಪೋರ್ಟ್, ಜಮೀನು ಸೇರಿ ನಮ್ಮ ದೇಶವನ್ನೇ ಅದಾನಿಗೆ ಕೊಡುತ್ತಿದ್ದಾರೆ. ಒಬನನ್ನು ಶ್ರೀಮಂತ ಮಾಡಲು ಹೀಗೆ ಅಕ್ರಮ ಮಾಡುತ್ತಿದ್ದಾರೆ. ಇದಕ್ಕಾಗಿಯೇ ಅದಾನಿ ಕೇಂದ್ರ ಸರ್ಕಾರಕ್ಕೆ, ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ. ಈ ಎಲ್ಲಾ ಅಕ್ರಮದ ಬಗ್ಗೆ ತನಿಖೆ ಆಗಬೇಕು. ಅದಾನಿಯನ್ನು ಕೂಡಲೇ ಬಂಧನ ಮಾಡಬೇಕೆಂದು ಆಗ್ರಹಿಸಿದರು. ಇದೇ ವೇಳೆ ಚುನಾವಣಾ ಫಲಿತಾಂಶ ವಿಚಾರವಾಗಿ ಮಾತನಾಡಿ , ಮಹಾರಾಷ್ಟ್ರ, ಜಾರ್ಖಂಡ್ ಎರಡು ರಾಜ್ಯದಲ್ಲಿ ನಾವು ಗೆಲ್ಲುತ್ತೇವೆ ಎಂದು ಭರವಸೆ ಇಟ್ಟುಕೊಂಡಿದ್ದೇವೆ. ಆದರೆ ಕರ್ನಾಟಕದ್ದು ನಿಮಗೆಲ್ಲ ಗೊತ್ತಿದೆ ಬಿಡಿ ಎಂದರು.