ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ವೇಳಾಪಟ್ಟಿಯನ್ನು ಪಾಕಿಸ್ತಾನ ಐಸಿಸಿ ಅನುಮತಿಗಾಗಿ ತಾತ್ಕಾಲಿಕ ವೇಳಾಪಟ್ಟಿ ಸಲ್ಲಿಸಿದ್ದು, ಅಂತಿಮ ವೇಳಾಪಟ್ಟಿ ಇದೇ ವಾರ ಬಿಡುಗಡೆಯಾಗುವ ಸಾಧ್ಯತೆಯಿದೆ. ಪ್ರಸಕ್ತ ಟೂರ್ನಿಗೆ ಪಾಕಿಸ್ತಾನದ ಮುಲ್ತಾನ್, ರಾವಲ್ಪಿಂಡಿ ಹಾಗೂ ಲಾಹೋರ್ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಪಾಕ್, ಭಾರತದ ಎಲ್ಲ ಪಂದ್ಯಗಳನ್ನು ಲಾಹೋರ್ ಕ್ರೀಡಾಂಗಣದಲ್ಲಿ ನಿಗದಿಪಡಿಸಿದೆ.
ರೈತರೇ ಗಮನಿಸಿ.. ಅಣಬೆ ಕೃಷಿ ಮಾಡುವರಿಗೆ ಶೆಡ್ ನಿರ್ಮಾಣಕ್ಕಾಗಿ ಶೇ.50 ಸಬ್ಸಿಡಿ! ಇಂದೇ ಅರ್ಜಿ ಸಲ್ಲಿಸಿ
ಹೈಬ್ರಿಡ್ ಮಾದರಿಗೆ ಒಪ್ಪಲು ಒತ್ತಡ:
2025ರ ಚಾಂಪಿಯನ್ಸ್ ಟ್ರೋಫಿಗಾಗಿ ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಪ್ರಯಾಣಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಹಾಗಾಗಿ ಹೈಬ್ರಿಡ್ ಮಾದರಿಗೆ ಒಪ್ಪಿಕೊಳ್ಳುವಂತೆ ಐಸಿಸಿಯ ಉನ್ನತ ಅಧಿಕಾರಿಗಳು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಮೇಲೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಆದ್ರೆ ಇದ್ಯಾವುದಕ್ಕೂ ಕಿವಿಗೊಡದ ಪಿಸಿಬಿ ಈ ಬಾರಿ ಭಾರತ, ಬರಲಿ ಬರದೇ ಇರಲಿ, ಪಾಕ್ ನಲ್ಲೇ ಟೂರ್ನಿ ನಡೆಯಲಿದೆ ಎಂದು ಹೇಳಿದೆ.
8 ತಂಡಗಳು 2 ಗುಂಪು:
ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಈ ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಒಂದೇ ಗ್ರೂಪ್ನಲ್ಲಿರುವುದರಿಂದ ಮೊದಲ ಸುತ್ತಿನಲ್ಲೇ ಮುಖಾಮುಖಿಯಾಗಲಿರುವುದು ಖಚಿತ.
ಅದರಂತೆ ಮಾರ್ಚ್ 1 ರಂದು ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಯ 11ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಕಣಕ್ಕಿಳಿಯಲಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಲಾಹೋರ್ನ ಗಡ್ಡಾಫಿ ಸ್ಟೇಡಿಯಂ ಆಯೋಜಿಸಲು ಪಿಸಿಬಿ ನಿರ್ಧರಿಸಿದೆ. ಹಾಗೆಯೇ ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ವರದಿಯಾಗಿದೆ.