ರಾಮನಗರ:- ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವೇ ಸ್ಪರ್ಧೆ ಮಾಡುವುದಾಗಿ ಈ ಹಿಂದೆ ಸುಳಿವು ನೀಡಿದ್ದ ಡಿಕೆ ಶಿವಕುಮಾರ್ ಅವರು ಇದೀಗ ಅವರು ವರಸೆ ಬದಲಿಸಿದ್ದು, ಬೇರೆಯವರು ಸ್ಪರ್ಧೆ ಮಾಡುವ ಬಗ್ಗೆ ಪರೋಕ್ಷವಾಗಿ ಹೇಳಿದ್ದಾರೆ.
Haveri: ಜಿಲ್ಲಾಪಂಚಾಯಿತಿ ತ್ರೈಮಾಸಿಕ ಸಭೆಯಲ್ಲಿ ಅಧಿಕಾರಿಗಳಿಗೆ ಶಿವಾನಂದ ಪಾಟೀಲ್ ಕ್ಲಾಸ್..!
ಎಚ್ಡಿ ಕುಮಾರಸ್ವಾಮಿ ಅವರು ಸಂಸದರಾಗಿ ಆಯ್ಕೆಯಾಗಿರುವುದರಿಂದ ಚನ್ನಪಟ್ಟಣ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇದೀಗ ಬೈ ಎಲೆಕ್ಷನ್ ಎದುರಾಗಿದ್ದು, ಇದನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಂಭೀರವಾಗಿ ಪರಿಗಣಿಸಿದ್ದಾರೆ.
ಇಂದು ಚನ್ನಪಟ್ಟಣದ ಬೈರಾಪಟ್ಟಣದಲ್ಲಿ ಮಾತನಾಡರುವ ಡಿಕೆಶಿ, ಯಾರೇ ಅಭ್ಯರ್ಥಿ ಆದರೂ ನನ್ನ ಮುಖ ನೋಡಿ ವೋಟ್ ಹಾಕಿ. ಕಾಂಗ್ರೆಸ್ನಿಂದ ಯಾರೇ ಅಭ್ಯರ್ಥಿ ಆದರೂ ಮತ ಹಾಕಿ ಎಂದು ಸ್ಫೋಟಕ ಮಾತುಗಳನ್ನಾಡಿದ್ದಾರೆ. ಈ ಮೂಲಕ ತಾವು ಸ್ಪರ್ಧೆ ಮಾಡುವುದಿಲ್ಲ ಬೇರೆಯವರು ಸ್ಪರ್ಧೆ ಮಾಡುತ್ತಾರೆ ಅವರಿಗೆ ನನ್ನ ಮುಖ ನೋಡಿ ಮತ ನೀಡಿ ಎಂದು ಹೇಳಿದ್ದಾರೆ. ಇಂದು ಚನ್ನಪಟ್ಟಣದ ಭೈರಾಪಟ್ಟಣದಲ್ಲಿದಲ್ಲಿ ಮಾತನಾಡಿರುವ ಡಿಕೆ ಶಿವಕುಮಾರ್, ಪ್ರತಿ ಜಿಲ್ಲೆಯಲ್ಲೂ ಜನಸ್ಪಂದನ ಕಾರ್ಯಕ್ರಮ ನಡೆಸಲು ಸಿಎಂ ಸೂಚನೆ ನೀಡಿದ್ದಾರೆ. ಅದರಂತೆ ಚನ್ನಪಟ್ಟಣದಲ್ಲಿ ನಾನು ವಿಶೇಷ ಆದ್ಯತೆ ನೀಡಿ ಕಾರ್ಯಕ್ರಮ ಮಾಡ್ತಿದ್ದೇನೆ. ಜನರ ಸಮಸ್ಯೆಗಳನ್ನ ಬಗೆಹರಿಸಿ ತೊಂದರೆ ತಪ್ಪಿಸಬೇಕು. ಅರ್ಜಿ ವಿಲೇವಾರಿಗೆ ಅಧಿಕಾರಿಗಳಿಗೆ ಟೈಂ ಪಿಕ್ಸ್ ಮಾಡ್ತಿದ್ದೇವೆ. ಶೀಘ್ರದಲ್ಲೇ ಜನರ ಜನರ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಕ್ಷೇತ್ರಕ್ಕೆ ಜಮೀರ್, ಕೃಷ್ಣಭೈರೇಗೌಡರು ಬರ್ತಾರೆ. ಇಲ್ಲಿ ರಿವ್ಯೂ ಮೀಟಿಂಗ್ ಮಾಡಿ ಸಮಸ್ಯೆ ಆಲಿಸುತ್ತಾರೆ ಎಂದರು.
ಇನ್ನು ಇದೇ ವೇಳೆ ಚನ್ನಪಟ್ಟಣ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಯಾರೇ ಅಭ್ಯರ್ಥಿ ಆದರೂ ನನಗೆ ಓಟು ಹಾಕಿ. ಅಭ್ಯರ್ಥಿ ನಾನೇ ಆದರೂ ನಾಮಿನಿ ಇರ್ತಾರೆ. ನನಗೆ ಓಟು ಹಾಕಿ ಎಂದೇ ಜನರಲ್ಲಿ ಕೇಳುತ್ತೇನೆ. ಯಾರೇ ಅಭ್ಯರ್ಥಿ ಆದರೂ ನನ್ನ ಮುಖ ನೋಡಿ ಓಟು ಹಾಕಿ ಎಂದು ಮನವಿ ಮಾಡಿದರು.