ಬೆಂಗಳೂರು: ಮುಖ್ಯಮಂತ್ರಿಗಳು ಆತುರಾತುರವಾಗಿ ಕ್ಲೀನ್ಚಿಟ್ ಪಡೆಯುವ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮುಖ್ಯಮಂತ್ರಿಗಳ ಒತ್ತಡಕ್ಕೆ ಮಣಿದು ಕ್ಲೀನ್ಚಿಟ್ ಕೊಡಲಾಗಿದೆ ಎಂಬುದು ನಮ್ಮೆಲ್ಲರ ಸ್ಪಷ್ಟ ಅಭಿಪ್ರಾಯ. ಪ್ರಶ್ನೆಗೆ ಉತ್ತರಿಸಿದ ಅವರು,
ಇ.ಡಿ. ಆಧಾರರಹಿತವಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಲು ಸಾಧ್ಯವಿಲ್ಲ. ಮುಡಾ ಹಗರಣ ಆಗಿದೆ ಎಂದಿದ್ದರೆ ಅದಕ್ಕೆ ಆಧಾರಗಳಿರುತ್ತವೆ. ಇ.ಡಿ. ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಆತುರಾತುರವಾಗಿ ಕ್ಲೀನ್ಚಿಟ್ ಪಡೆಯುವ ಕೆಲಸ ಮಾಡಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು.
Whatsapp ನಲ್ಲಿ ಬಂದ Voice message ಅನ್ನು ಅಕ್ಷರ ರೂಪಕ್ಕೆ ಬದಲಾಯಿಸುವುದು ಹೇಗೆ ಗೊತ್ತಾ..?
ಮೊನ್ನೆ ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರೆಸ್ ನೋಟನ್ನೂ ಬಿಡುಗಡೆ ಮಾಡಿದೆ. ಮುಡಾದಲ್ಲಿ ಎಷ್ಟು ಕೋಟಿ ಹಗರಣ ನಡೆದಿದೆ ಎಂಬುದನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮತ್ತೊಂದು ಕಡೆ ರಾಜ್ಯ ಹೈಕೋರ್ಟ್ ಕೂಡ ಮೈಸೂರಿನ ಮುಡಾ ಹಗರಣವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದೆ. ಇದರ ನಡುವೆ ಮುಖ್ಯಮಂತ್ರಿಗಳೂ ಸೇರಿ ರಾಜ್ಯ ಸರ್ಕಾರವು ಮಾನ್ಯ ರಾಜ್ಯಪಾಲರನ್ನು ಅವಹೇಳನಕಾರಿಯಾಗಿ ನಿಂದಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.