ಬೆಂಗಳೂರು:- ಕರ್ನಾಟಕದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ 2 ದಿನ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ.
ಈ ಸಂಬಂಧ ಮಾತನಾಡಿದ ಅವರು,ದಕ್ಷಿಣ ಒಳನಾಡಿನ ಮಲೆನಾಡು, ಮಧ್ಯ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗದ ಅಲ್ಲಲ್ಲಿ ಇಂದು ಮತ್ತು ನಾಳೆ ಮಳೆಯಾಗಬಹುದು ಎಂದು ಭಾರತೀಯ ಹಮಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಪ್ರಾದೇಶಿಕ ಕೇಂದ್ರ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳು ಬಹಳಷ್ಟು ಇವೆ. ಆದರೆ ಕರಾವಳಿಯ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ಅದೇ ರೀತಿ ಮುಂದಿನ 48 ಗಂಟೆಗಳ ಒಳಗಡೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಕಂಡು ಬರಲಿದೆ. ಅದೇ ರೀತಿ ಕರಾವಳಿ ಭಾಗದಲ್ಲೂ ಒಣ ಹವೆ ಇರಲಿದೆ. ಆದರೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಮುನ್ಸೂಚನೆ ನೀಡಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಯಾವ ಭಾಗದಲ್ಲೂ ಗುಡುಗು ಮುನ್ನೆಚ್ಚರಿಕೆಯಿಲ್ಲ. ಅದೇ ರೀತಿ ತಾಪಮಾನ ಏರಿಕೆಯಂತಹ ಯಾವುದೇ ಸನ್ನಿವೇಶವೂ ಇರುವುದಿಲ್ಲ ಎಂದು ತಿಳಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಕಡೆ ಗುರುವಾರ ಉಷ್ಣಾಂಶದಲ್ಲಿ ಕುಸಿತ ಕಂಡು ಬಂದಿದೆ. ಅದರಲ್ಲೂ ಕರ್ನಾಟಕದ ಸಮತಟ್ಟಾದ ಪ್ರದೇಶಗಳಲ್ಲಿನ ಅತಿ ಕಡಿಮೆ ಉಷ್ಣಾಂಶವು ವಿಜಯಪುರದಲ್ಲಿ 14.5 ಡಿಗ್ರಿ ಸೆಲ್ಸಿಯಸ್ನಷ್ಟು ದಾಖಲಾಗಿದೆ.
ಬೆಂಗಳೂರು ನಗರದಲ್ಲಿಯೂ ಮುಂದಿನ ಎರಡು ದಿನಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಅದೇ ರೀತಿ ಉಷ್ಣಾಂಶದಲ್ಲೂ ಏರಿಕೆ ಕಾಣಲಿದೆ.