ಬೆಂಗಳೂರು:- ಕಾಂಗ್ರೆಸ್ ಸರ್ಕಾರಕ್ಕೆ ಆಪರೇಷನ್ ಕಮಲದ ಅಗತ್ಯವಿಲ್ಲ. ತಾನಾಗಿಯೇ ಪತನವಾಗುವುದು ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಆಪರೇಷನ್ ಕಮಲದ ಮೂಲಕ ಕರ್ನಾಟಕದಲ್ಲಿ ಆಡಳಿತಾರೂಢ ಸರ್ಕಾರವನ್ನು ನಾವು ಬೀಳಿಸುವುದಿಲ್ಲ ಎಂದು ಹೇಳಿದರು. ರಾಜಕೀಯ ಪಕ್ಷಗಳಲ್ಲಿ ಸಹಜವಾಗಿಯೇ ಭಿನ್ನಾಭಿಪ್ರಾಯಗಳಿದ್ದು, ರಾಜ್ಯದ ಕಾಂಗ್ರೆಸ್ ಪಕ್ಷವೂ ಇದಕ್ಕೆ ಹೊರತಾಗಿಲ್ಲ. ಕರ್ನಾಟಕ ಕಾಂಗ್ರೆಸ್ ಪಕ್ಷದೊಳಗೆ ಅಜಿತ್ ಪವಾರ್ ಅವರಂತಹ ವ್ಯಕ್ತಿಗಳು ಇದ್ದಾರೆ ಎಂದು ಅಶೋಕ ಒತ್ತಿ ಹೇಳಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ.
ಬೆಂಗಳೂರು ಮತ್ತು ಬಳ್ಳಾರಿಯಲ್ಲಿ ಎನ್ಐಎ ದಾಳಿ ನಡೆಸಿದೆ. ಕರ್ನಾಟಕದ ವಿವಿಧೆಡೆ ಭಯೋತ್ಪಾದಕ ಚಟುವಟಿಕೆಗಳಿಗೆ ಬೆಂಬಲವಿದೆ ಎಂದು ತಿಳಿಸಿದ್ದಾರೆ. ಪಿಎಫ್ ಐ ಸಂಘಟನೆಯನ್ನು ನಿಷೇಧಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಿಎಫ್ ಐ ಬಗ್ಗೆ ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂದು ಅಶೋಕ ಕಿಡಿಕಾರಿದರು. ಕರ್ನಾಟಕ ಭಯೋತ್ಪಾದಕರ ಹಬ್ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳಬೇಕು ಎಂದು ಒತ್ತಾಯಿಸಿದರು.