ಹಾಸನ :- ಪೊಲೀಸ್ ಕ್ವಾರ್ಟರ್ಸ್ನಲ್ಲೇ ಸಕಲೇಶಪುರ ಪೊಲೀಸ್ ಕಾನ್ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಜರುಗಿದೆ.
ಸೋಮಶೇಖರ್ ಮೃತ ಕಾನ್ಸ್ಟೇಬಲ್. ಪತಿ ಸೋಮಶೇಖರ್ ವಿರುದ್ಧ ಕಿರುಕುಳ ಆರೋಪ ಮಾಡಿ ಪತ್ನಿ DySPಗೆ ದೂರು ನೀಡಿದ್ದರು. ಇದರಿಂದ ಮನನೊಂದು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸಕಲೇಶಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.