ಬೆಂಗಳೂರು: ವಿಜಯೇಂದ್ರ ನೇತೃತ್ವದಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡುತ್ತೇವೆ ಎಂದು ಬಿ.ವೈ.ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ನನಗೆ ಕೊಟ್ಟ ಸಹಕಾರವನ್ನು ಬಿ.ವೈ.ವಿಜಯೇಂದ್ರಗೂ ಕೊಡಬೇಕು. ರಾಜ್ಯಾಧ್ಯಕ್ಷರಾದ ವಿಜಯೇಂದ್ರಗೆ ನಾವೆಲ್ಲರೂ ಜೊತೆಯಾಗಿ ನಿಲ್ತೇವೆ. ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳಲ್ಲೂ ಗೆಲ್ಲುವ ಪ್ರಯತ್ನ ಮಾಡುತ್ತೇವೆ ಎಂದರು.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ರಾಜ್ಯಾಧ್ಯಕ್ಷರ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅಧಿಕಾರ ಸ್ವೀಕರಿಸಿದ್ದಾರೆ. ನಳಿನ್ ಕುಮಾರ್ ಕಟೀಲು ಅವರು ವಿಜಯೇಂದ್ರಗೆ ಅಧಿಕಾರ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅಶೋಕ್, ಗೋವಿಂದ ಕಾರಜೋಳ, ಮುನಿರತ್ನ, ಆರಗ ಜ್ಞಾನೇಂದ್ರ, ಶ್ರೀರಾಮುಲು, ಗೋಪಾಲಯ್ಯ, ಪ್ರಭು ಚೌಹಾಣ್, ಸಂಸದರಾದ ರಾಘವೇಂದ್ರ, ತೇಜಸ್ವಿ ಸೂರ್ಯ ಸೇರಿ ಹಲವರು ಭಾಗಿಯಾಗಿದ್ದಾರೆ.