ಮುಂಬೈ: ಇತ್ತೀಚಿನ ದಿನಗಳಲ್ಲಿ ಮಾದಕ ವ್ಯಸನಕ್ಕೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಅದೇ ರೀತಿ ಡ್ರಗ್ಸ್ ಖರೀದಿಸಲು ಹೆತ್ತ ಮಕ್ಕಳನ್ನೇ ಮಾರಾಟ ಮಾಡಿದ ಆರೋಪದ ಮೇಲೆ ದಂಪತಿ ಸೇರಿದಂತೆ ಮೂವರನ್ನು ಮುಂಬೈ ಕ್ರೈಂ ಬ್ರಾಂಚ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಪೋಷಕರಾದ ಶಬ್ಬೀರ್, ಸಾನಿಯಾ ಮತ್ತು ಶಕೀಲ್ ಮಕ್ರಾನಿ ಬಂಧಿತ ಆರೋಪಿಗಳು. ಅಲ್ಲದೇ ಮಾರಾಟದಿಂದ ಕಮಿಷನ್ ಪಡೆದ ಆರೋಪಿ ಉಷಾ ರಾಥೋಥ್ ಎಂಬಾಕೆಯನ್ನೂ ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಅಂಧೇರಿಯಲ್ಲಿ ಒಂದು ತಿಂಗಳ ಒಂದು ಮಗುವನ್ನು ರಕ್ಷಣೆ ಮಾಡಿದ್ದು, 2 ವರ್ಷದ ಮತ್ತೊಂದು ಮಗುವಿಗಾಗಿ ಹುಡುಕಾಟ ನಡೆಯುತ್ತಿದೆ. ಮಾದಕ ವ್ಯಸನಿಗಳಾಗಿದ್ದ ದಂಪತಿ ಅಂಧೇರಿಯಲ್ಲಿ ತಮ್ಮ ಇಬ್ಬರು ಮಕ್ಕಳನ್ನು ಮಾರಾಟ ಮಾಡಿ ಹಣ ಸಂಪಾದಿಸಿದ್ದಾರೆ. ಗಂಡು ಮಗುವನ್ನು 60 ಸಾವಿರ ರೂ.ಗೆ, ಒಂದು ತಿಂಗಳ ಹೆಣ್ಣು ಮಗುವನ್ನು 14 ಸಾವಿರ ರೂ.ಗಳಿಗೆ ಮಾರಾಟ ಮಾಡಿದ್ದಾರೆ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ಕುಟುಂಬಕ್ಕೆ ತಿಳಿದು ತಕ್ಷಣ ಡಿ.ಎನ್.ನಗರ ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ಪ್ರಕರಣ ಬೆಳಿಕಿಗೆ ಬಂದಿದ್ದು, ಬಂಧಿಸಲಾಗಿದೆ ಎಂದು ಮುಂಬೈ ಅಪರಾಧ ವಿಭಾಗದ ದಯಾ ನಾಯಕ್ ತಿಳಿಸಿದ್ದಾರೆ. ಸದ್ಯ ಮಕ್ಕಳನ್ನು ಖರೀದಿ ಮಾಡಿದ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಡಿ.ಎನ್ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಅಪರಾಧ ವಿಭಾಗಕ್ಕೆ ಹಸ್ತಾಂತರಿಸಿದ್ದಾರೆ.