ಹುಬ್ಬಳ್ಳಿ: ಸಿಎಂ ಬದಲಾವಣೆ ಕೂಗು ಕೈ ಪಾಳಯದಲ್ಲಿ ಹೊಸದೇನು ಅಲ್ಲ. ಮುಡಾ ಪ್ರಕರಣ ಹೊರಬಂದ ದಿನದಿಂದಲೂ ಇಂತಹದೊಂದು ಚರ್ಚೆ ಹುಟ್ಟಿಕೊಂಡಿದೆ. ಅಹಿಂದ ಸಮುದಾಯ ನಾಯಕರೇ ಮುಂದಿನ ಸಿಎಂ ಆಗಬೇಕೆಂಬ ಕೂಗು ಜೋರಾಗಿ ಕೇಳಿಬರ್ತಿದೆ. ಇದೀಗ ನಾನು ದಲಿತ, ನಾನೇಕ ಮುಖ್ಯಮಂತ್ರಿಯಾಗಬಾರದು. ದಲಿತರು ಯಾಕೆ ಸಿಎಂ ಆಗಬಾರದು? ಎಂದು ಸಚಿವ ಆರ್.ಬಿ. ತಿಮ್ಮಾಪುರ ಪ್ರಶ್ನಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ದಲಿತರು ಯಾಕೆ ಸಿಎಂ ಆಗಬಾರದು? ನಾನು ಯಾಕೆ ಸಿಎಂ ಆಗಬಾರದು? ಮುಖ್ಯಮಂತ್ರಿ ಮಾಡಿದರೆ ಯಾರು ಬೇಡ ಅಂತಾರೆ. ನನಗೆ ಅಷ್ಟು ಶಕ್ತಿ ಇದೆಯೋ ಇಲ್ವೋ, ಸಿಎಲ್ಪಿಯಲ್ಲಿ ನನ್ನ ಒಪ್ಪುತ್ತಾರೋ ಇಲ್ವೋ? ಇವೆಲ್ಲವೂ ಪರಿಗಣನೆಗೆ ಬರುತ್ತದೆ. ಹೈಕಮಾಂಡ್ ಹೇಳಿದರೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂದು ಹೇಳಿದರು.
ಅತಿಯಾಗಿ ಹಾಲು ಕುಡಿಯುವುದರಿಂದ ಇಷ್ಟೆಲ್ಲಾ ಸಮಸ್ಯೆಗಳು ಉಂಟಾಗುತ್ತವೆಯೇ..? ಈ ಸ್ಟೋರಿ ನೋಡಿ
ಸೋಮವಾರ ನಡೆದ ಸಭೆಯಲ್ಲಿ ಬೆಳಗಾವಿ ಕಾರ್ಯಕ್ರಮದ ಬಗ್ಗೆ ಚರ್ಚೆಯಾಗಿದೆ. ಶಾಸಕಾಂಗ ಸಭೆಯಲ್ಲಿ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ದಲಿತ ಶಾಸಕರ ಡಿನ್ನರ್ ಸಭೆ ರದ್ದಾಗಿಲ್ಲ, ಮುಂದೂಡಿದ್ದೇವೆ. ದಲಿತ ಶಾಸಕರ ಕಷ್ಟ ನೋವು ಆಲಿಸಬೇಕು. ತ್ಯಾಗದ ಬಗ್ಗೆ ನಾನು ಮಾತಾಡಿದ್ದೇನೆ ಎಂದು ತಿಳಿಸಿದರು.
ಸಿಎಂ ಬದಲಾವಣೆ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸ್ತಾರೆ. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೆಳೆಗೆ ಇಳಿಸುತ್ತಾರೆ ಎಂದು ಹೇಳಿದ್ದು ಯಾರು? ಅಧಿಕಾರ ಹಂಚಿಕೆ ನನಗೆ ಗೊತ್ತಿಲ್ಲ. ಸಚಿವ ಸಂಪುಟ ಪುನರಾಚನೆ ವಿಚಾರ ನನಗೆ ಗೊತ್ತಿಲ್ಲ ಎಂದರು.