ಗದಗ: ಮೆಣಸಿನಕಾಯಿ ಬೆಳೆ ಕಾಯುತ್ತಿದ್ದ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಗದಗ ತಾಲೂಕಿನ ತಿಮ್ಮಾಪೂರ ಗ್ರಾಮದ ಜಮೀನೊಂದರಲ್ಲಿ ನಿನ್ನೆ ರಾತ್ರಿ ದುಷ್ಕರ್ಮಿಗಳು ಮೆಣಸಿನಕಾಯಿ ಬೆಳೆ ಕಾಯಲು ಇದ್ದ ವ್ಯಕ್ತಿಯನ್ನ ಮಾರಾಕಾಸ್ತ್ರಗಳಿಂದ ಕತ್ತು ಕತ್ತರಿಸಿ ರುಂಡದೊಂದಿಗೆ ಪರಾರಿಯಾಗಿದ್ದಾರೆ. ಕೊಲೆಗೀಡಾದ ವ್ಯಕ್ತಿಯನ್ನು ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಾಳೆಕೊಪ್ಪ ಗ್ರಾಮದ ನಿವಾಸಿ ಸಣ್ಣ ಹನಮಪ್ಪ ವಜ್ರದ (65) ಎಂದು ತಿಳಿದು ಬಂದಿದೆ.
ಗುಡಿಸಲಿನಲ್ಲಿ ದೇಹ ಮಾತ್ರ ಇದ್ದು, ಬೆಳಿಗ್ಗೆ ಜಮೀನು ಮಾಲೀಕರು ಬಂದು ನೋಡಿದಾಗ ಈ ದುಷ್ಕೃತ್ಯ ಬೆಳಕಿಗೆ ಬಂದಿದೆ. ಸುದ್ದಿ ತಿಳಿದು ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಭೀಕರ ಕೊಲೆಯಿಂದಾಗಿ ಸುತ್ತಮುತ್ತಲಿನ ರೈತರು ಬೆಚ್ಚಿ ಬಿದ್ದಿದ್ದಾರೆ. ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.