ತುಮಕೂರು:- ಭ್ರೂಣ ಲಿಂಗ ಹತ್ಯೆ ತಡೆಗಟ್ಟಲು ಇಲಾಖೆ ಗಮನ ಹರಿಸುತ್ತೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಹೆಣ್ಣು ಭ್ರೂಣ ಹತ್ಯೆ ಬಗ್ಗೆ ಗೃಹ ಸಚಿವರ ಜೊತೆಯೂ ಚರ್ಚಿಸಿದ್ದೇನೆ. ಪೊಲೀಸ್ ಇಲಾಖೆ ಈ ಜಾಲವನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳುತ್ತಿದೆ. ಈ ಪ್ರಕರಣವನ್ನು ವಿಸ್ತೃತವಾಗಿ ತನಿಖೆ ಆಗಬೇಕು ಎಂದು ಹೇಳಿದ್ದೆವು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಜಿ. ಪರಮೇಶ್ವರ್ ಚರ್ಚಿಸಿ ಸಿಐಡಿಗೆ ವಹಿಸಿದ್ದಾರೆ ಎಂದರು.
ಲಿಂಗಾನುಪಾತ ನೋಡಿದಾಗ ಹೆಣ್ಣುಮಕ್ಕಳ ಸಂಖ್ಯೆಯೂ ಕಡಿಮೆ ಇದೆ. ಸಮಾಜದಲ್ಲಿ ಹೆಣ್ಣುಮಗು ಅಂದಾಕ್ಷಣ ಬೇಡ ಅನ್ನೋ ಪರಿಸ್ಥಿತಿ ಇದೆ. ಭ್ರೂಣ ಲಿಂಗ ಹತ್ಯೆ ತಡೆಗಟ್ಟಲು ಇಲಾಖೆ ಹೆಚ್ಚು ಗಮನ ಹರಿಸುತ್ತದೆ. ಪ್ರಕರಣ ಸಂಬಂಧ ಇಬ್ಬರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ ಎಂದು ಹೇಳಿದ್ದಾರೆ.