ಕಾನ್ಪುರ: ಖಾಸಗಿ ಆಸ್ಪತ್ರೆಯೊಂದರ ನಿರ್ದೇಶಕ 22 ವರ್ಷದ ನರ್ಸ್ ಮೇಲೆ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಅತ್ಯಾಚಾರವೆಸಗುವ ಮುನ್ನ ನರ್ಸ್ಗೆ ಅಮಲು ಬೆರೆಸಿದ ತಂಪು ಪಾನೀಯವನ್ನು ನೀಡಲಾಗಿತ್ತು ಎಂದು ಶಂಕಿಸಲಾಗಿದೆ. ಎಫ್ಐಆರ್ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಕಲ್ಯಾಣಪುರದ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಅಭಿಷೇಕ್ ಪಾಂಡೆ ಮಾತನಾಡಿ, ಮಹಿಳೆ ಕಳೆದೆರಡು ತಿಂಗಳುಗಳಿಂದ ಕಲ್ಯಾಣಪುರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಾರೆ.
ನೀವು ರಾತ್ರಿ ಕಡಿಮೆ ನಿದ್ದೆ ಮಾಡ್ತೀರಾ? ಹಾಗಿದ್ರೆ ಈ ಖಾಯಿಲೆಗಳು ಬರ್ಬೋದು ಹುಷಾರ್..!
ಭಾನುವಾರ ಸಂಜೆ, ಆಸ್ಪತ್ರೆಯಲ್ಲಿ ನಿರ್ದೇಶಕ ಆಯೋಜಿಸಿದ್ದ ಪಾರ್ಟಿಯಲ್ಲಿ ನರ್ಸ್ ಪಾಲ್ಗೊಂಡಿದ್ದಳು. ಕೆಲಸದ ನೆಪದಲ್ಲಿ ಆಕೆಯನ್ನು ರಾತ್ರಿ ಸಮಯದಲ್ಲಿ ಆಸ್ಪತ್ರೆಯಲ್ಲಿ ಇರುವಂತೆ ನಿರ್ದೇಶಕ ಹೇಳಿದ್ದು, ಮಧ್ಯರಾತ್ರಿ ಆಕೆಯನ್ನು ಕೋಣೆಗೆ ಕರೆದು ಬಲವಂತವಾಗಿ ಒಳಗೆ ಎಳೆದುಕೊಂಡು ಹೋಗಿ ಬಾಗಿಲು ಹಾಕಿ ಕೃತ್ಯವೆಸಗಿದ್ದಾನೆ ಎಂದು ತಿಳಿಸಿದ್ದಾರೆ. ಈ ಘಟನೆಯನ್ನು ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ನರ್ಸ್ಗೆ ನಿರ್ದೇಶಕ ಬೆದರಿಕೆ ಹಾಕಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯ ಗುರುತನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ. ಬಂಧನದ ನಂತರ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುವುದು ಮತ್ತು ಮ್ಯಾಜಿಸ್ಟ್ರೇಟ್ ಮುಂದೆ ಆಕೆಯ ಹೇಳಿಕೆಯನ್ನು ದಾಖಲಿಸಲು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿ ಹೇಳಿದರು.