ಗದಗ:- ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂದಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ತಿಳಿಸಿದರು.
ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಲೋಕಸಭಾ ಸಾರ್ವತ್ರಿಕ ಚುನಾವಣೆ ಕುರಿತು ಜರುಗಿದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಗದಗ ಜಿಲ್ಲೆಯ ವ್ಯಾಪ್ತಿಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳಿದ್ದು, 65-ಶಿರಹಟ್ಟಿ, 66-ಗದಗ & 67-ರೋಣ ವಿಧಾನಸಭಾ ಕ್ಷೇತ್ರಗಳು 10-ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಇನ್ನುಳಿದ 68-ನರಗುಂದ ವಿಧಾನಸಭಾ ಕ್ಷೇತ್ರವು 3-ಬಾಗಲಕೋಟ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ ಎಂದರು.
10-ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಜಿಲ್ಲಾಧಿಕಾರಿಗಳು, ಹಾವೇರಿ ಹಾಗೂ 3-ಬಾಗಲಕೋಟ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಜಿಲ್ಲಾಧಿಕಾರಿಗಳು, ಬಾಗಲಕೋಟ ಇವರು ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುವರು. ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು- 65 ಶಿರಹಟ್ಟಿ ; 66-ಗದಗ ಉಪವಿಭಾಗಾಧಿಕಾರಿಗಳು ಗದಗ -66; , ಡಿಯುಡಿಸಿ ಯೋಜನಾ ನಿರ್ದೇಶಕರು ರೋಣ-67 ಮತಕ್ಷೇತ್ರಕ್ಕೆ, ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯಾವಹಾರಗಳ ಇಲಾಖೆಯ ಉಪನಿರ್ದೇಶಕರು ನರಗುಂದ ಮತಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.
ಪ್ರತಿ ಅಭ್ಯರ್ಥಿಗಳ ಖರ್ಚು ವೆಚ್ಚಗಳ ಬಗ್ಗೆ ನಿಗಾ ಇಡಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 02 ರಂತೆ ಒಟ್ಟು 08 ಲೆಕ್ಕ ತಂಡಗಳನ್ನು ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಒಟ್ಟು 04 ಸಹಾಯಕ ವೆಚ್ಚ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ. ಭಾರತ ಚುನಾವಣಾ ಆಯೊಗದ ನಿರ್ದೇಶನಗಳಂತೆ ಸಾರ್ವಜನಿಕ ಹಾಗೂ ಖಾಸಗಿ ಆಸ್ಥಿಗೆ ಸಂಬಂಧಿಸಿದಂತೆ ಗೋಡೆ ಬರಹ, ಪೋಸ್ಟರ್ಸ್, ಬ್ಯಾನರ್ಸ್ಗಳನ್ನು ಗುರುತಿಸಿ ಸದರಿ ಎಲ್ಲಾ ಪೋಸ್ಟರ್ / ಬ್ಯಾನರಗಳನ್ನು ತೆರವುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ದೂರು ನಿರ್ವಹಣಾ ಕೇಂದ್ರ: ಜಿಲ್ಲೆಯಲ್ಲಿ ಯಾವುದೇ ರೀತಿ ದೂರುಗಳ ನಿರ್ವಹಣೆಗಾಗಿ ಸೈಯದ್ ಜೋಹೈಬುಲ್ಲಾ, ಜಿಲ್ಲಾ ವ್ಯವಸ್ಥಾಪಕರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಗದಗ (ಮೊ.ನಂ: 8277944217) ಇವರನ್ನು ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಲಾಗಿದೆ. ಇವರ ಅಧೀನದಲ್ಲಿ Complaint Monitoring Team CVIGL ತಂಡ, 1950 ಕಾಲ್ ಸೆಂಟರ್ ಹಾಗೂ ಜಿಲ್ಲಾ ಕಂಟ್ರೋಲ್ ರೂಂ ಕಾರ್ಯನಿರ್ವಹಿಸುತ್ತವೆ.
ಮತದಾರರ ವಿವರ: ಇದುವರೆಗೆ ಜಿಲ್ಲೆಯಲ್ಲಿ 4,40,927 ಪುರುಷ ಮತದಾರರು, 4,42,647 ಮಹಿಳಾ ಮತದಾರರು, 60 ಇತರೆ ಮತದಾರರ ಹೀಗೆ ಒಟ್ಟು 8,83,634 ಮತದಾರರು ಇರುತ್ತಾರೆ. ಜಿಲ್ಲೆಯಲ್ಲಿ ಈವರೆಗೆ 18-19 ವಯೋಮಾನದ ಒಟ್ಟು 23665 ಯುವ ಮತದಾರರ ಹೆಸರುಗಳನ್ನು ಸೇರ್ಪಡೆಗೊಂಡಿರುತ್ತವೆ. ಜಿಲ್ಲೆಯಲ್ಲಿ ಈವರೆಗೆ 11897 ದಿವ್ಯಾಂಗ ಚೇತನರು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಂಡಿರುತ್ತಾರೆ. ಅದೇರೀತಿ, 85 ವರ್ಷ ವಯೋಮಿತಿ ಮೀರಿದ ಹಿರಿಯ ನಾಗರೀಕರು 5747 ಜನ ಮತದಾರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಂಡಿರುತ್ತಾರೆ.
ಮತಗಟ್ಟೆ ವಿವರ: ಜಿಲ್ಲೆಯಲ್ಲಿ ಒಟ್ಟು 961 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 65-ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 251, 66-ಗದಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 223, 67-ರೋಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 267 ಹಾಗೂ 68-ನರಗುಂದ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 220 ಮತಗಟ್ಟೆಗಳು ಬರುತ್ತವೆ.
ಚುನಾವಣಾ ವೇಳಾಪಟ್ಟಿ : ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಎಪ್ರಿಲ್ 12 ರಂದು ಅಧಿಸೂಚನೆ ಹೊರಡಿಸಲಾಗುವುದು. ನಾಮಪತ್ರ ಸಲ್ಲಿಕೆಗೆ ಎಪ್ರಿಲ್ 19 ಕೊನೆಯ ದಿನವಾಗಿದೆ. ಎಪ್ರಿಲ್ 20 ರಂದು ನಾಮಪತ್ರಗಳ ಪರಿಶೀಲನೆ ಜರುಗಲಿದ್ದು, ಎಪ್ರಿಲ್ 22 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ. ಮೇ 7 ರಂದು ಮತದಾನ ಜರುಗಲಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ. ಚುನಾವಣಾ ಪ್ರಕ್ರಿಯೆ ಜೂನ್ 6 ರಂದು ಕೊನೆಗೊಳ್ಳಲಿದೆ.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯುತ ಮತದಾನ ನಡೆಯುವಂತಾಗಲು ಹಾವೇರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಶಿರಹಟ್ಟಿ, ಗದಗ ಹಾಗೂ ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 10 ಚೆಕ್ ಪೆÇೀಸ್ಟ್ ಗಳನ್ನು ಹಾಗೂ ಬಾಗಲಕೋಟೆ ಲೋಕಸಭಾ ಕ್ಷೇತ್ರದ ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 2 ಚೆಕ್ ಪೆÇೀಸ್ಟ್ ಗಳನ್ನು ತೆರೆಯಲಾಗಿದ್ದು, 24/7 ಕೆಲಸ ನಿರ್ವಹಿಸಲು ಕ್ರಮ ಜರುಗಿಸಲಾಗಿದೆ.
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಯು ಮತದಾನವಾಗಲು ಮುಂಜಾಗ್ರತಾ ಕ್ರಮವಾಗಿ ಗೂಂಡಾ ಹಾಗೂ ರೌಡಿಗಳ ಗಡಿಪಾರಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ, ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ 1500 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದರು.
ಜಿಲ್ಲಾ ಪಂಚಾಯತ ಸಿಇಒ ಭರತ್ ಎಸ್. ಮಾತನಾಡಿ, ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಚುನಾವಣಾ ಪ್ರಚಾರ ಸಭೆ ವೀಕ್ಷಣೆ, ಮಾದರಿ ಸಂಹಿತೆ ಪಾಲನೆ ಕುರಿತು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 9 ರಂತೆ ಒಟ್ಟು 36 ಸಂಚಾರಿ ದಳಗಳನ್ನು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 3ರಂತೆ ಒಟ್ಟು 12 ವಿಡಿಯೋ ಕಣ್ಗಾವಲು ತಂಡಗಳನ್ನು, ಹಾಗೂ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ ಒಂದರಂತೆ 4 ವಿಡಿಯೋ ವೀಕ್ಷಣಾ ತಂಡಗಳನ್ನು ರಚಿಸಲಾಗಿದೆ ಎಂದರು.
ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆ ಪಾಲನೆಯಾಗದಿದ್ದಲ್ಲಿ, ದೂರುಗಳಿದ್ದಲ್ಲಿ ಸಾರ್ವಜನಿಕರ 1950 ಟೋಲ್ ಫ್ರೀ ನಂಬರ್ ಗೆ ಕರೆ ಮಾಡಿ ದೂರು ನೀಡಬಹುದು. ಇಲ್ಲವಾದಲ್ಲಿ ಸಿ-ವಿಜಲ್ ಆಪ್ ನಲ್ಲೂ ದೂರು ದಾಖಲಿಸಬಹುದು ಎಂದು ಹೇಳಿದರು.
ಪತ್ರಿಕಾಗೋಷ್ಟಿಯಲ್ಲಿ ಅಪರ ಜಿಲ್ಲಾಧಿಕಾರಿ ಸುರೇಖಾ, ಜಿಲ್ಲಾ ವಾರ್ತಾಧಿಕಾರಿ ವಸಂತ ಮಡ್ಲೂರ ಹಾಜರಿದ್ದರು.