ಅಹದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ನ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ತಂಡವನ್ನು ಮಣಿಸಿ ರಾಜಸ್ಥಾನ್ ರಾಯಲ್ಸ್ ತಂಡ 2ನೇ ಕ್ವಾಲಿಫೈಯರ್ಗೆ ಲಗ್ಗೆಯಿಟ್ಟಿದೆ
ನೆಗೆಟಿವ್ ಕಾಮೆಂಟ್ಸ್ಗೆ ಕಣ್ಣೀರಿಟ್ಟ ರೀಲ್ಸ್ ಕ್ವೀನ್ ಮಧು ಗೌಡ..ಧೈರ್ಯ ತುಂಬಿದ ನಾದಿನಿ…
ಇತ್ತ ಗೆಲುವಿನ ನಿರೀಕ್ಷೆಯೊಂದಿಗೆ ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ 17ನೇ ಬಾರಿ ಸೋಲಿನೊಂದಿಗೆ ಐಪಿಎಲ್ ಅಭಿಯಾನ ಅಂತ್ಯಗೊಳಿಸಿದ್ದಾರೆ. ಅತ್ತ ರಾಜಸ್ಥಾನ್ ರಾಯಲ್ಸ್ ತಂಡ ಗೆಲ್ಲುತ್ತಿದ್ದಂತೆ ಇತ್ತ ಕಿಂಗ್ ಕೊಹ್ಲಿ ಭಾವುಕರಾದರು. ಅದರಲ್ಲೂ ವಿರಾಟ್ ಕೊಹ್ಲಿ ಮುಖ ಮರೆಮಾಚಿ ಡಗೌಟ್ನಲ್ಲಿ ಕೂತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದೀಗ ಈ ಫೋಟೋ ಮುಂದುವರೆದ ಕೊಹ್ಲಿಯ ಕಣ್ಣೀರ ಕಥೆ ಎಂಬ ಟ್ಯಾಗ್ ಲೈನ್ನೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಈ ಬಾರಿಯ ಐಪಿಎಲ್ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ 15 ಪಂದ್ಯಗಳಿಂದ 741 ರನ್ ಕಲೆಹಾಕಿದ್ದರು. ಅದರಲ್ಲೂ ಕೊನೆಯ 6 ಪಂದ್ಯಗಳಲ್ಲಿ ಆರ್ಸಿಬಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಕಾರಣ ಈ ಸಲ ಫೈನಲ್ಗೇರುವ ನಿರೀಕ್ಷೆಯಿತ್ತು
ಆದರೆ ನಿರ್ಣಾಯಕ ಪಂದ್ಯದಲ್ಲಿ ಆರ್ಸಿಬಿ ಮುಗ್ಗರಿಸಿದೆ. ಇದರೊಂದಿಗೆ 17 ವರ್ಷಗಳ ವಿರಾಟ್ ಕೊಹ್ಲಿಯ ಕನಸು ಕೂಡ ಕಮರಿದೆ. ಅಂದರೆ ಕಳೆದ 16 ವರ್ಷಗಳಿಂದ ಟ್ರೋಫಿ ಎತ್ತಿ ಹಿಡಿಯಬೇಕೆಂಬ ಹಂಬಲ ಹೊಂದಿರುವ ಕಿಂಗ್ ಕೊಹ್ಲಿಗೆ ಈ ಬಾರಿ ಪ್ರಶಸ್ತಿ ಗೆಲ್ಲುವ ವಿಶ್ವಾಸವಿತ್ತು. ಆದರೀಗ ಎಲಿಮಿನೇಟರ್ ಪಂದ್ಯದಲ್ಲಿ ಸೋಲುವ ಮೂಲಕ ಆರ್ಸಿಬಿ ತಂಡದ ಟ್ರೋಫಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)