ಚಾಮರಾಜನಗರ : ಚಾಲಕ ಮೂರ್ಛೆತಪ್ಪಿ ಬಿದ್ದು ನಿಯಂತ್ರಣ ತಪ್ಪಿದ ಕೆಎಸ್ಆರ್ಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದ್ದಯು, ಐವರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ಸಮೀಪ ಘಟನೆ ನಡೆದಿದೆ.
ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿದ್ದಾಗ, ಬಸ್ ಚಾಲನೆ ವೇಳೆಯಲ್ಲಿ ಚಾಲಕನಿಗೆ ದಿಢೀರ್ ಮೂರ್ಛೆ ರೋಗ ಕಾಣಿಸಿಕೊಂಡಿದ್ದು, ಬಸ್ ನಿಯಂತ್ರಣ ತಪ್ಪಿದ ಪರಿಣಾಮ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅದರಲ್ಲಿ ಬಸ್ಸಿನ ಮುಂಭಾಗದಲ್ಲಿ ಕುಳಿತ್ತಿದ್ದ ಐವರು ಗಂಭೀರ ಗಾಯಗೊಂಡಿದ್ದಾರೆ.
ಬಸ್ ಮತ್ತು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್ ಸವಾರ
ಸಾರಿಗೆ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ, ಕೊನೆರ್ಲು ಗಡಿಭಾಗದಲ್ಲಿ ಘಟನೆ ನಡೆದಿದೆ. ಅಂಗಡಿ ಗ್ರಾಮದ ಮಂಜುನಾಥ್ (31) ಮೃತ ವ್ಯಕ್ತಿಯಾಗಿದ್ದು, ಬೇಲೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.