ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರೂ. ನೀಡುವ ಯೋಜನೆ ಜಾರಿಗೊಳಿಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿತ್ತು. ಈ ಹಿನ್ನೆಲೆ ಬೆಂಗಳೂರು ಪ್ರಧಾನ ಅಂಚೆ ಕಚೇರಿಗೆ (GPO) ಕಳೆದ ಎರಡು ದಿನಗಳಿಂದ ಬೆಳ್ಳಂ ಬೆಳಗ್ಗೆ ಆಗಮಿಸಿ ಅಂಚೆ ಖಾತೆ ತೆರೆಯಲು ಮುಗಿಬಿದ್ದಿದ್ದರು.
ಪ್ರತಿ ತಿಂಗಳು ಖಾತೆಗೆ 8 ಸಾವಿರ ರೂ. ಹಣ ಜಮೆಯಾಗುವ ಈ ಯೋಜನೆ ಜಾರಿಗೆ ಬರಲಿದೆ ಎಂಬ ವಿಶ್ವಾಸದಿಂದ ಮಹಿಳೆಯರು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಡಿ ಖಾತೆ ತೆರೆಯಲು ನಗರದ ವಿವಿಧ ಭಾಗಗಳಿಂದ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರು. ಈ ಹಿನ್ನೆಲೆ ಬೆಂಗಳೂರು ಕಚೇರಿಯಲ್ಲೂ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ ಖಾತೆಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗಿತ್ತು.
![Demo](https://ainlivenews.com/wp-content/uploads/2023/12/spoorthi-1.jpg)
Pension Rules: ಗಂಡನ ಸಾವಿನ ನಂತರ ಪತ್ನಿಗೆ ಪಿಂಚಣಿಯ ಹಕ್ಕು ಇದೆಯೇ? EPFO ನಿಯಮದಲ್ಲಿ ಏನಿದೆ..?
ಇಂಡಿಯನ್ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಕೌಂಟ್ ತೆರೆದವರ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ ಎಂಬ ವದಂತಿಗಳು ಕಳೆದ ವಾರಾಂತ್ಯದಲ್ಲಿ ಹರಿದಾಡುತ್ತಿದ್ದವು. ಇದರಿಂದ ಮಹಿಳೆಯರು ಪೋಸ್ಟ್ ಆಫೀಸ್ಗಳಿಗೆ ಮುಗಿ ಬಿದ್ದಿದ್ದರು.
ಎರಡು ವರ್ಷಗಳ ಹಿಂದೆಯೇ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಅಕೌಂಟ್ ಯೋಜನೆಯನ್ನು ಪರಿಚಯಿಸಲಾಗಿದ್ದು, ಇದು ಉಳಿತಾಯ ಖಾತೆಯಾಗಿರುತ್ತದೆ. ಆದರೆ ಈಗ ವದಂತಿ ಹರಡಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಈ ಖಾತೆ ತೆರೆಯಲು ಮುಂದಾಗಿದ್ದಾರೆ ಎಂದು ಅಂಚೆ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)