ತುಮಕೂರು: ನೀರು ಸರಬರಾಜಿಗೆ ತಗಲುವ ವೆಚ್ಚವನ್ನು ಭರಿಸುವಂತೆ ಸಿದ್ದಗಂಗಾ ಮಠಕ್ಕೆ ಕೆಐಎಡಿಬಿಯಿಂದ ಪತ್ರ ಬರೆದಿರುವುದು ತೀವ್ರ ವಿವಾದಕ್ಕೆ ಗುರಿಯಾಗಿದ್ದು, ಸರ್ಕಾರದ ನಡವಳಿಕೆಗೆ ವ್ಯಾಪಕ ಆಕೋಶ್ರ ಕೇಳಿಬಂದಿದೆ. ಇದರ ಬೆನ್ನಲ್ಲೇ ಸಿದ್ದಗಂಗಾ ಮಠಕ್ಕೆ ವಿದ್ಯುತ್ ಬಿಲ್ ಪಾವತಿಸುವಂತೆ ಕೆಐಎಡಿಬಿ ನೀಡಿದ ನೋಟೀಸ್ ಅನ್ನು ವಾಪಸ್ ಪಡೆಯಲಾಗುವುದು ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಮಾತನಾಡಿದ ಅವರು, ”ಸಿದ್ದಗಂಗಾ ಮಠದ ಬಳಿ ಕೆಐಎಡಿಬಿಗೆ ಸೇರಿದ ಕೆರೆ ಇದೆ. ಆ ಕೆರೆಯಿಂದ ನೀರನ್ನು ಮಠದವರು ತೆಗೆದುಕೊಂಡಿದ್ದರು. ಅದಕ್ಕೆ ಬಿಲ್ ಕೊಡುವಂತೆ ನೋಟಿಸ್ ನೀಡಲಾಗಿತ್ತು. ಸಿದ್ದಗಂಗಾ ಮಠವು ವಿಶ್ವಕ್ಕೆ ಮಾದರಿಯಾದ ಮಠ. ಹತ್ತು ಸಾವಿರ ಮಕ್ಕಳಿಗೆ ವಿದ್ಯಾಭ್ಯಾಸ ನೀಡುತ್ತಿದೆ. ಬಸವಣ್ಣರ ತತ್ವದ ಅಡಿ ದಾಸೋಹ ಮಾಡುತ್ತಿರುವ ಮಠ ಅದಾಗಿದೆ. ಮಠವು ನೀರು ಪಡೆದುಕೊಂಡರೂ ತಪ್ಪಲ್ಲ. ಇಲಾಖೆಯ ಮುಖ್ಯ ಅಭಿಯಂತರರು ಮಠದ ಜೊತೆ ಮಾತನಾಡಿದ್ದಾರೆ” ಎಂದರು.
Recruitment 2024: ಸುಪ್ರೀಂ ಕೋರ್ಟ್ʼನಲ್ಲಿದೆ ಉದ್ಯೋಗಾವಕಾಶ.! ಆಸಕ್ತರು ಇವತ್ತೇ ಅಪ್ಲೈ ಮಾಡಿ
”ನೀರಿನ ಬಿಲ್ ಅನ್ನು ಮನ್ನಾ ಮಾಡುತ್ತೇವೆ. ಅವರು ಬಳಸಿದ್ದರೂ ತಪ್ಪಲ್ಲ. ಸ್ವಾಮೀಜಿ ಜೊತೆ ಮಾತನಾಡುತ್ತೇನೆ. ನೀರು ಬಳಸಿಲ್ಲ ಎಂದರೆ ಆಯ್ತು, ಬಳಸಿದ್ದರೂ ತಪ್ಪಲ್ಲ. ಮಠದವರು ಸ್ವಂತಕ್ಕೆ ನೀರನ್ನು ಬಳಸಲ್ಲ. ಅವರು ಇನ್ಮುಂದೆ ಬಳಸಿದರೂ ತಪ್ಪಿಲ್ಲ. 10 ಸಾವಿರ ಮಕ್ಕಳಿಗೆ ಅನ್ನ, ಶಿಕ್ಷಣ ಕೊಡುತ್ತಾರೆ. ಒಂದು ವೇಳೆ ನೀರು ಬಳಸದೇ ಇದ್ದರೂ ನೋಟಿಸ್ ಕೊಟ್ಟರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗದುಕೊಳ್ಳುತ್ತೇನೆ” ಎಂದು ಸಚಿವರು ತಿಳಿಸಿದರು.