ಬೆಂಗಳೂರು:- ರಾಜಕಾಲುವೆಗಳ ಒತ್ತುವರಿ ತೆರವು ಮಾಡಲೇಬೇಕು ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಖಡಕ್ ಸೂಚನೆ ಕೊಟ್ಟಿದ್ದಾರೆ.
RCB ಗೆ ಎಂಟ್ರಿ ಕೊಡ್ತಾರಾ ಜಸ್ಪ್ರೀತ್ ಬುಮ್ರಾ: ದಿನೇಶ್ ಕಾರ್ತಿಕ್ ಪ್ಲಾನ್ ಏನು!?
ಬೆಂಗಳೂರಿನಲ್ಲಿ ಮಳೆ ಆರ್ಭಟ ಜೋರಾಗಲಿದೆ. ಹೀಗಾಗಿ ದೊಡ್ಡ ಚರಂಡಿಗಳು ಓಪನ್ ಇರುವ ಸ್ಥಳಗಳನ್ನು ಗುರುತಿಸಿ ಮೊದಲೇ ಬಂದೋಬಸ್ತ್ ಮಾಡಲಾಗಿದೆ. ಇದರಿಂದ ಇದುವರೆಗೆ ಯಾವುದೇ ಸಾವು ನೋವು ಸಂಭವಿಸಿಲ್ಲ.
ಇನ್ನು ರಾಜಕಾಲುವೆಗಳ ಒತ್ತುವರಿ ತೆರವು ಮಾಡಬೇಕು. ಜೊತೆಗೆ ಕೋಡಿಗೆ ಗೇಟ್ ಅಳವಡಿಸುವ ಮೂಲಕ ಮಳೆಗಾಲದಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ನಿಯಂತ್ರಿಸಿ ಪ್ರವಾಹ ತಡೆಗಟ್ಟಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬೆಂಗಳೂರಿನಲ್ಲಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು, ಪ್ರತಿದಿನ ನಗರದ ಪರಿಸ್ಥಿತಿ ಕುರಿತು ಸಭೆ ನಡೆಸಿ ಪರಿಶೀಲಿಸಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸೂಚಿಸಿದರು.
ಇದೇ ವೇಳೆ ವಲಯ ಆಯುಕ್ತರ ಸಭೆ ನಡೆಸಿ, ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಾಗೂ ಎಂಜಿನಿಯರ್ಗಳಿಗೆ ಜವಾಬ್ದಾರಿ ನಿಗದಿ ಪಡಿಸಿ. ಕರ್ತವ್ಯಲೋಪ ಎಸಗಿದರೆ, ಮುಲಾಜಿಲ್ಲದೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ಕೊಟ್ಟರು. ಅಲ್ಲದೆ, ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಸಂಸ್ಥೆಗಳಾದ ಬಿಡಿಎ, ಬಿಡಬ್ಲ್ಯುಎಸ್ಎಸ್ಬಿ, ಬಿಎಂಆರ್ಸಿಎಲ್, ಬಿಬಿಎಂಪಿ ಮೊದಲಾದವುಗಳ ನಡುವೆ ಸಮನ್ವಯ ವಹಿಸಲು ಹೇಳಿದರು.
ಇನ್ನು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ತಮ್ಮ ಅಧೀನದಲ್ಲಿರುವ ಅಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ನಗರ ಮತ್ತು ಪಟ್ಟಣಗಳಲ್ಲಿ ಕಾಲುವೆಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಕ್ರಮ ಕೈಗೊಳ್ಳಬೇಕು. ಎಲ್ಲಾ ಚರಂಡಿಗಳ ಸ್ವಚ್ಚತೆಯನ್ನು ನಿರಂತರವಾಗಿ ಮಾಡಬೇಕು. 210 ಕೋಟಿ ರೂಪಾಯಿಯನ್ನು ರಾಜ್ಯ ಹೆದ್ದಾರಿಗಳ ದುರಸ್ತಿಗೆ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು