ಐಸಿಸಿ ರ್ಯಾಂಕಿಂಗ್ನಲ್ಲಿ ಬಹಳಷ್ಟು ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ಇಂಗ್ಲೆಂಡ್ ತಂಡದ ಸ್ಟಾರ್ ಬ್ಯಾಟ್ಸ್ಮನ್ ಡೇವಿಡ್ ಮಲಾನ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಬಹಳ ದಿನಗಳಿಂದ ಇಂಗ್ಲೆಂಡ್ ತಂಡದಿಂದ ಹೊರಗಿದ್ದ ಮಲಾನ್, 2023ರ ಏಕದಿನ ವಿಶ್ವಕಪ್ ಬಳಿಕ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ.
ಆಸ್ಟ್ರೇಲಿಯ ವಿರುದ್ದ ಸರಣಿಯಿಂದ ಅವಕಾಶ ವಂಚಿತರಾದ ಹಲವು ಅನುಭವಿ ಆಟಗಾರರಲ್ಲಿ ಮಲಾನ್ ಕೂಡ ಒಬ್ಬರು. 2017ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಮಾಡಿದ್ದ ಮಲಾನ್ ಅವರ ವೃತ್ತಿಜೀವನ ಕೇವಲ 7 ವರ್ಷಗಳಿಗೆ ಅಂತ್ಯಗೊಂಡಿದೆ. ಆದಾಗ್ಯೂ ಮಲಾನ್ ತನ್ನ ಅತ್ಯಲ್ಪ ವೃತ್ತಿಜೀವನದಲ್ಲೂ ಅನೇಕ ದಾಖಲೆಗಳನ್ನು ಮಾಡಿದ್ದಾರೆ. ಡೇವಿಡ್ ಮಲಾನ್ ಇಂಗ್ಲೆಂಡ್ ಪರ 22 ಟೆಸ್ಟ್, 30 ಏಕದಿನ ಮತ್ತು 62 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ನಲ್ಲಿ ಒಟ್ಟು 8 ಶತಕಗಳನ್ನು ಬಾರಿಸಿರುವ ಮಲಾನ್, ಜೋಸ್ ಬಟ್ಲರ್ ಹೊರತುಪಡಿಸಿ, ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ಶತಕ ಬಾರಿಸಿದ ಇಂಗ್ಲೆಂಡ್ನ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
ಇಂಗ್ಲೆಂಡ್ ಕ್ರಿಕೆಟ್ ಪಾಳಯದಿಂದ ಆಘಾತಕ್ಕಾರಿ ಸುದ್ದಿ ಹೊರಬಂದಿದ್ದು, ಐಸಿಸಿ ರ್ಯಾಂಕಿಂಗ್ನಲ್ಲಿ ಬಹಳಷ್ಟು ದಿನಗಳ ಕಾಲ ಅಗ್ರಸ್ಥಾನದಲ್ಲಿದ್ದ ತಂಡದ ಸ್ಟಾರ್ ಬ್ಯಾಟ್ಸ್ಮನ್ ಡೇವಿಡ್ ಮಲಾನ್ ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಬಹಳ ದಿನಗಳಿಂದ ಇಂಗ್ಲೆಂಡ್ ತಂಡದಿಂದ ಹೊರಗಿದ್ದ ಮಲಾನ್, 2023ರ ಏಕದಿನ ವಿಶ್ವಕಪ್ ಬಳಿಕ ತಂಡದಲ್ಲಿ ಸ್ಥಾನ ಪಡೆದಿರಲಿಲ್ಲ.