ಮಂಗಳೂರು: ಈ ದೇಶದ ಸಂಪತ್ತು ಭಾರತೀಯರಿಗೆ ಸೇರಿದ್ದು, ಭಾರತಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಸಿ.ಟಿ.ರವಿ (C.T.Ravi) ಟಾಂಗ್ ಕೊಟ್ಟರು. ಮಂಗಳೂರಿನಲ್ಲಿ (Mangaluru) ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿಕೆ ಅಪಾಯಕಾರಿ. ಈ ಮಾನಸಿಕತೆಯಿಂದಲೇ ದೇಶ ವಿಭಜನೆಗೆ ಕಾರಣವಾಗಿದ್ದು, ಈ ಹೇಳಿಕೆ ಕೋಮುವಾದ ನೀತಿಯ ನಿದರ್ಶನ. ಓಲೈಕೆ ರಾಜಕಾರಣ ವೋಟ್ ಬ್ಯಾಂಕ್ಗಾಗಿ ಇಂತಹ ಅಪಾಯಕಾರಿ ಹೇಳಿಕೆ.
ಈ ದೇಶದ ಸಂಪತ್ತು ಭಾರತೀಯರಿಗೆ ಸೇರಿದ್ದು. ಭಾರತೀಯತೆಯನ್ನ ಒಪ್ಪಿದವರಿಗೆ ಸೇರಿದ್ದು. ಭಾರತದಲ್ಲೇ ಇದ್ದು ಭಾರತ ದೇಶಕ್ಕೆ ದ್ರೋಹ ಬಗೆಯುವವರಿಗೆ ಅಲ್ಲ. ದೇಶದ ಸಂಪತ್ತಿನ ಮೊದಲ ಹಂಚಿಕೆ ಬಡವರಿಗೆ ಆಗಬೇಕು, ಅದು ನಮ್ಮ ನೀತಿ. ಈ ಓಲೈಕೆಯ ರಾಜನೀತಿಯ ಪರಿಣಾಮ ಕೋಟ್ಯಂತರ ಜನ ನಿರ್ವಸತಿಯಾಗೋದಕ್ಕೆ ಕಾರಣವಾಗಿದ್ದು. ಕಾಂಗ್ರೆಸ್ ಇಸ್ ರಿಯಲ್ ಕಮ್ಯುನಲ್ ಪಾರ್ಟಿ ಎಂದು ವಾಗ್ದಾಳಿ ನಡೆಸಿದರು.