ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ (Salman Khan), ಕೋರ್ಟಿನಿಂದ ನೆಮ್ಮದಿ ಸಿಕ್ಕಿದ್ದರೂ, ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ (Lawrence Bishnoi) ಮಾತ್ರ ನೆಮ್ಮದಿ ನೀಡುತ್ತಿಲ್ಲ. ಪದೇ ಪದೇ ನಟನಿಗೆ ಜೀವ ಬೆದರಿಕೆ ಹಾಕುತ್ತಿದ್ದಾನೆ. ಮತ್ತೆ ಶಾರುಖ್ ಇ-ಮೇಲ್ ಖಾತೆಗೆ ಸಂದೇಶವೊಂದನ್ನು ಕಳುಹಿಸಿದ್ದು, ವಿದೇಶದಲ್ಲಿ ನೆಲೆಸೋಕೆ ವಿಸಾ ಇರಬಹುದು. ಸಾವಿಗೆ ಇಲ್ಲ ಎಂದು ಬರೆದಿದ್ದಾನೆ.
ಲಾರೆನ್ಸ್ ನಿಂದ ಜೀವ ಬೆದರಿಕೆ (Life Threat) ಮೇಲ್ ಬರುತ್ತಿದ್ದಂತೆಯೇ ಮತ್ತೆ ಪೊಲೀಸ್ ಅಧಿಕಾರಿಗಳು ಸಲ್ಮಾನ್ ಮನೆಯ ಭದ್ರತೆಯನ್ನು ತಪಾಸಣೆ ಮಾಡಿದ್ದಾರೆ. ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗದಿರುವಂತೆ ಸೂಚನೆ ನೀಡಿದ್ದಾರೆ. ಅಲ್ಲದೇ, ಮತ್ತಷ್ಟು ಭದ್ರತೆಯನ್ನು ಹೆಚ್ಚಿಸುವ ಕುರಿತಂತೆ ಚರ್ಚಿಸಿದ್ದಾರೆ.
ಸಲ್ಮಾನ್ ಖಾನ್ ಗೆ ಜೀವ ಬೆದರಿಕೆ ಹಿನ್ನೆಲೆಯಲ್ಲಿ ಈ ಹಿಂದೆ ಲಾರೆನ್ಸ್ ಸಹಚರರನ್ನು ಬಂಧಿಸಿ ಅಗತ್ಯ ಮಾಹಿತಿಯನ್ನು ಮುಂಬೈ ಪೊಲೀಸ್ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಗಾಬರಿ ಹುಟ್ಟಿಸುವಂತಹ ಹೇಳಿಕೆಗಳು ಆ ಟೀಮ್ ನಿಂದ ಬಂದಿವೆ ಎಂದು ಸುದ್ದಿ ಆಗಿತ್ತು. ಹಾಗಾಗಿ ಈ ಹಿಂದೆಯೂ ಸಲ್ಮಾನ್ ಖಾನ್ ಗೆ ಭಾರೀ ಭದ್ರತೆ ನೀಡಲಾಗಿತ್ತು.