ಹುಬ್ಬಳ್ಳಿ :- ಆಟ ಆಡಲು ಕೃಷಿ ಹೊಂಡಕ್ಕೆ ಹೋಗಿದ್ದ ಬಾಲಕಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ಜರುಗಿದೆ.
Crime News: ಲವರ್ ಜೊತೆ ಸೇರಿ ಗಂಡನನ್ನೇ ಕೊಲೆಗೈದ ಪಾಪಿ ಹೆಂಡ್ತಿ! ಖಾಕಿ ಕಾರ್ಯಾಚರಣೆ ಹೇಗಿತ್ತು?
ಮೃತ ಬಾಲಕಿಯನ್ನು ಅಮೃತ ಶಿವಪುರ ಎಂದು ಗುರುತಿಸಲಾಗಿದೆ. ಎಳ್ಳ ಅಮವಾಸ್ಯೆ ಹಿನ್ನೆಲೆ ಕುಟುಂಬಸ್ಥರು ಸೇರಿ ಜಮೀನಿಗೆ ತೆರಳಿದ್ದ ವೇಳೆ ಶಿವಲಿಂಗಯ್ಯ ಎಂಬುವರಿಗೆ ಸೇರಿದ ಕೃಷಿ ಹೊಂಡದಲ್ಲಿ ಈ ಅವಘಡ ಸಂಭವಿಸಿದೆ. ಆಟವಾಡುತ್ತಾ ಹೋಗಿ ಕೃಷಿ ಹೊಂಡದಲ್ಲಿ ಮಕ್ಕಳು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಕೂಡಲೇ ಹೊಂಡಕ್ಕೆ ಬಿದ್ದ ಮೂರು ಮಕ್ಕಳನ್ನು ರಕ್ಷಿಸಿದ್ದು, ಆಸ್ಪತ್ರೆಗೆ ರವಾನಿಸಲಾಗಿದೆ.