ಲಕ್ನೋ: ತಂತ್ರಜ್ಞಾನ ಎಂಬುದು ಎಷ್ಟು ಅಪಾಯಕಾರಿಯೋ ಅಷ್ಟೇ ಪ್ರಯೋಜನಗಳು ಕೂಡ ಇವೆ. ಅಲೆಕ್ಸಾ (Alexa) ಎಂಬ ತಂತ್ರಜ್ಞಾನದಿಂದ ಬಾಲಕಿಯೊಬ್ಬಳು ತನ್ನ ಜೊತೆಗೆ ಒಂದು ವರ್ಷದ ಪುಟ್ಟ ಮಗುವಿನ ಪ್ರಾಣವನ್ನು ಕೂಡ ಉಳಿಸಿರುವ ಘಟನೆ ಉತ್ತರಪ್ರದೇಶದಲ್ಲಿ (Uttarpradesh) ನಡೆದಿದೆ. ಇದರ ಬೆನ್ನಲ್ಲೇ ಆನಂದ್ ಮಹೀಂದ್ರಾ ಅವರು ಉದ್ಯೋಗ ನೀಡುವ ಆಫರ್ ಕೊಟ್ಟಿದ್ದಾರೆ.
ಹೌದು ತಂತ್ರಜ್ಞಾನವನ್ನು ಬಳಸಿ ಮಂಗಗಳಿಂದ ಬಚಾವಾದ 13 ವರ್ಷದ ಬಾಲಕಿ ನಿಕಿತಾಗೆ ಉದ್ಯೋಗ ಕೊಡುವ ಕುರಿತು ಆನಂದ್ ಮಹೀಂದ್ರಾ ಅವರು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. “ಆಧುನಿಕ ಕಾಲದಲ್ಲಿ ನಾವು ತಂತ್ರಜ್ಞಾನದ ಗುಲಾಮರಾಗುತ್ತೇವೋ ಎಂಬ ಆತಂಕ ಕಾಡುತ್ತಿದೆ. ಆದರೆ, ಈ ಬಾಲಕಿಯು ಜಗತ್ತಿನಲ್ಲಿ ಮನುಷ್ಯನ ದಕ್ಷತೆಯನ್ನು ತಂತ್ರಜ್ಞಾನವು ಹೆಚ್ಚಿಸುತ್ತದೆ ಎಂಬುದನ್ನು ಸಾಬೀತುಪಡಿಸಿದ್ದಾಳೆ” ಎಂಬುದಾಗಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
The dominant question of our era is whether we will become slaves or masters of technology.
The story of this young girl provides comfort that technology will always be an ENABLER of human ingenuity.
Her quick thinking was extraordinary.
What she demonstrated was the… https://t.co/HyTyuZzZBK
— anand mahindra (@anandmahindra) April 6, 2024
“ಬಾಲಕಿಯ ಕ್ಷಿಪ್ರ ಯೋಚನಾಶಕ್ತಿಯು ಅತ್ಯದ್ಭುತವಾಗಿದೆ. ಅನಿರೀಕ್ಷಿತ ಜಗತ್ತಿನಲ್ಲಿ ಹೇಗೆ ಯೋಚಿಸಬೇಕು, ಯಾವ ರೀತಿ ನಿರ್ಧಾರ ತೆಗೆದುಕೊಳ್ಳಬೇಕು ಎಂಬುದನ್ನು ಈಕೆಯು ಸಾಬೀತುಪಡಿಸಿದ್ದಾಳೆ. ಈ ಬಾಲಕಿಯು ಶಿಕ್ಷಣ ಮುಗಿಸಿ, ಕಾರ್ಪೊರೇಟ್ ಜಗತ್ತಿಗೆ ಕಾಲಿಡಲು ತೀರ್ಮಾನಿಸಿದರೆ, ಮಹೀಂದ್ರಾ ಕಂಪನಿಯಲ್ಲಿ ಅವಳಿಗೊಂದು ಕುರ್ಚಿ ಕಾಯುತ್ತಿರುತ್ತದೆ” ಎಂಬುದಾಗಿ ಆನಂದ್ ಮಹೀಂದ್ರಾ ಅವರು ನಿಕಿತಾಗೆ ಉದ್ಯೋಗದ ಆಫರ್ ನೀಡಿದ್ದಾರೆ. ಆನಂದ್ ಮಹೀಂದ್ರಾ ಅವರ ಕುರಿತೂ ಜನ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.