ಬೆಂಗಳೂರು: ಮೇಕೆದಾಟು ಪಾದಯಾತ್ರೆ ರಾಜಕೀಯ ಚಳುವಳಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವ ಕುಮಾರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಡಿಯುವ ನೀರಿನ ವಿಚಾರದಲ್ಲಿ ಯಾವುದೇ ಎನ್ಒಸಿ ಬೇಡ ಅಂತ ಸುಪ್ರೀಂ ಕೋರ್ಟ್ ಹೇಳಿದೆ. ಈ ಮೇಕೆದಾಟಿನ ನೀರಿನಿಂದ 400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಬಹುದು,
ಹಾಗೂ ಬೆಂಗಳೂರಿಗೆ ಹೆಚ್ಚು ಕುಡಿಯುವ ನೀರು ಸಿಗುತ್ತದೆ. ಹೀಗಾಗಿ ಕಾಮಗಾರಿ ಆರಂಭಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಾದಯಾತ್ರೆ ಮಾಡಲು ಮುಂದಾಗಿದೆ ಇದರಲ್ಲಿ ಯಾವುದೇ ರಾಜಕೀಯವಿಲ್ಲ. ರಾಜ್ಯಕ್ಕೆ ಅನುಕೂಲ ಆಗುವ ನಿಟ್ಟಿನಲ್ಲಿ ಈ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
