ಬೆಂಗಳೂರು: ರಾಜ್ಯ ಸರ್ಕಾರ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗುವುದನ್ನು ತಪ್ಪಿಸಲು ರಾಜ್ಯ ಸರ್ಕಾರ ಬಗರ್ ಹುಕುಂ ಆ್ಯಪ್ ಬಿಡುಗಡೆ ಮಾಡಿದೆ. ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಸರ್ಕಾರ ಬಗರ್ ಹುಕುಂ ಆ್ಯಪ್ ರೂಪಿಸಿದೆ. ಇನ್ನೂ ಇದರ ಬೆನ್ನಲ್ಲೇ ಬಗರ್ ಹುಕುಂ ಅಡಿಯಲ್ಲಿ ಅರ್ಜಿ ಸಲ್ಲಿಸಿರುವ ಅರ್ಹ ಫಲಾನುಭವಿಗಳ ಪೈಕಿ ಕನಿಷ್ಟ 5,000 ಜನರ ಅರ್ಜಿಗಳನ್ನಾದರೂ “ಬಗರ್ ಹುಕುಂ” ಕಮಿಟಿಯ ಎದುರು ಮಂಡಿಸಿ ಡಿ.15ರ ಒಳಗೆ ಸಾಗುವಳಿ ಚೀಟಿ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಭರವಸೆ ನೀಡಿದರು.
Kitchen Hacks: ಚಳಿಗಾಲದಲ್ಲಿ ಮೊಸರು ಸರಿಯಾಗಿ ಆಗುತ್ತಿಲ್ವಾ..? ಚಿಂತೆ ಬಿಡಿ, ಈ ಟಿಪ್ಸ್ ಪಾಲಿಸಿ
ಈ ಬಗ್ಗೆ ಮಾಹಿತಿ ನೀಡಿದ ಅವರು, “ರಾಜ್ಯಾದ್ಯಂತ ಲಕ್ಷಾಂತರ ಜನ ಬಗರ್ ಹುಕುಂ ಅಡಿಯಲ್ಲಿ ಜಮೀನು ಮಂಜೂರಾತಿಗೆ ಕೋರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಪೈಕಿ 1,26,000 ಅರ್ಜಿಗಳನ್ನು ಮಾತ್ರ ಅರ್ಹ ಎಂದು ಪರಿಗಣಿಸಲಾಗಿದೆ. ಕೆಲ ಜಿಲ್ಲೆಗಳಲ್ಲಿ ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಈಗಾಗಲೇ ಬಗರ್ ಹುಕುಂ ಕಮಿಟಿ ಎದುರು ಇಡಲಾಗಿದೆ. ಆದರೆ, ಆ ಸಂಖ್ಯೆ ಸಮಾಧಾನಕರವಾಗಿಲ್ಲ. ಹೀಗಾಗಿ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಗುರಿ ನಿಗದಿಪಡಿಸಲಾಗಿದೆ. ಡಿ.15ರ ಒಳಗೆ ರಾಜ್ಯಾದ್ಯಂತ ಕನಿಷ್ಟ 5,000 ಅರ್ಹ ಅರ್ಜಿಗಳನ್ನು ಕಮಿಟಿ ಎದುರು ಮಂಡಿಸಲು ಸೂಚಿಸಲಾಗಿದೆ.
ಮೊದಲು ಗ್ರಾಮ ಆಡಳಿತ ಅಧಿಕಾರಿ ಅರ್ಜಿದಾರರ ಸ್ಥಳ ಪರಿಶೀಲಿಸಬೇಕು. ತದನಂತರ ಕಂದಾಯ ನಿರೀಕ್ಷಕರು ಹಾಗೂ ತಹಶೀಲ್ದಾರ್ ವರದಿ ಸಲ್ಲಿಸಬೇಕು. ಈ ಎಲ್ಲಾ ಪ್ರಕ್ರಿಯೆಗಳ ನಂತರವೇ ಅರ್ಹ ಅರ್ಜಿಗಳನ್ನು ಬಗರ್ ಹುಕುಂ ಕಮಿಟಿ ಎದುರು ಮಂಡಿಸಲು ಸಾಧ್ಯ. ಈ ಕೆಲಸಗಳು ಸಮಯಾವಕಾಶ ಬೇಡುವಂತದ್ದಾಗಿದ್ದು, ಅಧಿಕಾರಿಗಳಿಗೆ ಮೊದಲ ಹಂತದಲ್ಲಿ 5,000 ಅರ್ಜಿಗಳ ಗುರಿ ನೀಡಿದ್ದು, ಜನವರಿ ವೇಳೆಗೆ ಈ ಗುರಿ 15 ರಿಂದ 20 ಸಾವಿರಕ್ಕೆ ಏರಿಕೆಯಾಗಲಿದೆ ಎಂದರು.