ಬಳ್ಳಾರಿ:- ಬ್ರಿಟಿಷರಂತೆ ಕೆಟ್ಟ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಜನಾರ್ದನ್ ರೆಡ್ಡಿ ಕಿಡಿಕಾರಿದ್ದಾರೆ.
ನಿರುದ್ಯೋಗಿಗಳಿಗೆ ಖುಷಿ ವಿಚಾರ: KSRLPS ನಲ್ಲಿ ಭರ್ಜರಿ ಉದ್ಯೋಗ! ಆಸಕ್ತರು ಇಂದೇ ಅಪ್ಲೈ ಮಾಡಿ!
ಈ ಸಂಬಂಧ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಸರ್ಕಾರ ಸೇಡಿನಿಂದ ಲಾಠಿ ಚಾರ್ಜ್ ಮಾಡಿಸಿ, ಹೋರಾಟಗಾರಿಗೆ ಹಿಂಸೆ ನೀಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಸಿದ್ದರಾಮಯ್ಯ ಸರ್ಕಾರ ಬ್ರಿಟಿಷರ ಮಾದರಿಯಲ್ಲಿ ಭಯಾನಕವಾಗಿ ಪಂಚಮಸಾಲಿ ಮೀಸಲಾತಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಮಾಡಿಸಿದೆ. ವಯಸ್ಸು, ಹಿರಿಯರು, ಕಿರಿಯರು ಎನ್ನುವುದನ್ನು ನೋಡದೇ ಹೊಡೆದಿದ್ದಾರೆ ಎಂದು ದೂರಿದರು.
ಬಸವ ಜಯ ಮೃತ್ಯಂಜಯ ಸ್ವಾಮೀಜಿ ಅವರನ್ನ ಬಂಧನದಲ್ಲಿಟ್ಟಿದ್ದಾರೆ. ಹೋರಾಟಕ್ಕೆ ಬೆಂಬಲ ನೀಡಿದ್ದ ಪ್ರತಿಪಕ್ಷದ ನಾಯಕರನ್ನೂ ಬಂಧನ ಮಾಡಿದ್ದಾರೆ. ಅಮಾಯಕ ಜನರನ್ನ ಅಟ್ಟಾಡಿಸಿ ಮನಬಂದಂತೆ ಹೊಡೆದಿದ್ದಾರೆ. ಎಡಿಜಿಪಿ ಅವರು ಓಡೋಡಿ ಬಂದು ಸದನದಲ್ಲಿ ಮುಖ್ಯಮಂತ್ರಿ ಭೇಟಿಯಾದ್ರು. ಐದು ನಿಮಿಷಗಳಲ್ಲಿ ಸಿಎಂ ಹೊರಗೆ ಹೋಗಿ ಎಡಿಜಿಪಿ ಜೊತೆ ಸಭೆ ಮಾಡಿದ್ರು. ಆಮೇಲೆ ಏನೆಲ್ಲಾ ಅನಾಹುತ ಆಗಬೇಕಿತ್ತೋ ಅದೆಲ್ಲಾ ಆಯ್ತು. ಬ್ರಿಟಿಷರಂತೆ ಕೆಟ್ಟ ಕೆಲಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಸಿಟ್ಟು ಹೊರಹಾಕಿದರು.