ಹುಬ್ಬಳ್ಳಿ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದ್ದು ಇದರಿಂದಾಗಿ ಜನತೆ ರೋಸಿ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಸದಸ್ಯ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮೈಕ್ರೋ ಫೈನಾನ್ಸ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆಸರ್ಕಾರ ಇದಕ್ಕೆ ಕಡಿವಾಣ ಹಾಕುತ್ತಿಲ್ಲ . ಸಾಕಷ್ಟು ಜನರು ಕಿರುಕುಳದಿಂದ ಆತ್ಮಹತ್ಯ ಮಾಡಿಕೊಳ್ಳುತ್ತಿದ್ದಾರೆ. ಮಹಿಳೆಯರು ಮಾಂಗಲ್ಯ ಮಾರುತ್ತಾ ಇದ್ದಾರೆ. ಸರ್ಕಾರ ಒಂದು ಕಡೆ ಮಹಿಳೆಯರ ಬಗ್ಗೆ ಕಾಳಜಿ ವಹಿಸುತ್ತೇವೆ ಅಂತಾರೆ ಇನ್ನೊಂದು ಕಡೆ ಕಿತ್ತುಕೊಳ್ತಾ ಇದ್ದಾರೆ. ಮಹಿಳೆಯರು ಇದರಿಂದ ಬೇಸತ್ತು ಹೋಗಿದ್ದಾರೆ. ಈ ಬಗ್ಗೆ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕಿದೆ ಎಂದರು.
ಹಸಿರು ಬಣ್ಣಕ್ಕೆ ತಿರುಗಿದ ತುಂಗಾಭದ್ರ ನದಿ ನೀರು ; ಶುಗರ್ ಫ್ಯಾಕ್ಟರಿಗಳಿಗೆ ನೋಟಿಸ್
ಇನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಕ್ಲೀನ್ ಚಿಟ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಈ ಕುರಿತು ಅಧಿಕೃತವಾಗಿ ಬರಲಿ ಆಮೇಲೆ ಮಾತಾಡ್ತೇನೆ ಎಂದರು. ಇನ್ನು ಬಿಜೆಪಿಯ ನಾಯಕ ಶ್ರೀರಾಮುಲು ಕಾಂಗ್ರೆಸ್ ಗೆ ಸೇರ್ಪಡೆ ವಿಚಾರಕ್ಕೆ ಬೊಮ್ಮಾಯಿ ನಕಾರ ವ್ಯಕ್ತಪಡಿಸಿದರು. ಇನ್ನು ಕೋರ್ ಕಮಿಟಿ ಬಗ್ಗೆ ಪ್ರತಿಕ್ರಿಯೆಗೆ ನಿರಾಕರಣೆ ವ್ಯಕ್ತಪಡಿಸಿದರು.