ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಖಾಸಗಿ ಕೋವಿಡ್ ಕೇರ್ ಸೆಂಟರ್ ಗಳಿಗೆ ದರ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸರ್ಕಾರ ಹಲವು ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈ ಹಿಂದೆ ಸಾಕಷ್ಟು ಜನರು ಸೋಂಕಿಗೆ ಒಳಗಾಗಿ ತಮ್ಮ ಜೀವವನ್ನು ಕಳೆದುಕೊಂಡಿದ್ದರು.
ಆಗಿದ್ದಂತಹ ಸಂದರ್ಭದಲ್ಲಿ ಹೋಟೆಲ್ ಗಳನ್ನು ತಾತ್ಕಾಲಿಕ ಆಸ್ಪತ್ರೆಗಳಾಗಿ ಮಾರ್ಪಾಡು ಮಾಡಲಾಗಿತ್ತು. ಅದರಂತೆ ಮೂರನೇ ಅಲೆ ಯಲ್ಲೂ ಎಚ್ಚೆತ್ತುಕೊಂಡ ಸರ್ಕಾರ ಖಾಸಗಿ ಕೋವಿಡ್ ಕೇರ್ ಸೆಂಟರ್ ಗಳನ್ನು ತೆರೆಯಲು ಅನುಮತಿ ನೀಡಿದ್ದು, ಸಾಮಾನ್ಯ ಕೋವಿಡ್ ಕೇರ್ ಸೆಂಟರ್ ಗೆ ಪ್ರತಿ ದಿನಕ್ಕೆ 4000, 3 ಸ್ಟಾರ್ ಕೇರ್ ಸೆಂಟರ್ ಗಳಿಗೆ ದಿನಕ್ಕೆ 8000, ಹಾಗೂ 5 ಸ್ಟಾರ್ ಕೋವಿಡ್ ಹಾರೈಕೆ ಕೇಂದ್ರಗಳಿಗೆ 10 ಸಾವಿರ ನಿಗದಿ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
