ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿಗೆ ತೆರಳುವ ಹಿನ್ನೆಲೆಯಲ್ಲಿ ರೈತರಿಂದ ಸಿಎಂ ಘೇರಾವ್ ಹಾಕುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಮನೆಯಲ್ಲಿದ್ದ ಟಿ.ನರಸೀಪುರದ ಅನೇಕ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈತರು ಪೊಲೀಸರ ನಡೆಯನ್ನ ಖಂಡಿಸಿದ್ದಾರೆ. ಇದು ಹಿಟ್ಲರ್ ಸರ್ಕಾರವೋ ಇಲ್ಲ ಜನ ಸಾಮಾನ್ಯರ ಸರ್ಕಾರವೋ ? ವಿವಿಧ ಬೇಡಿಕೆ ಈಡೇರಿಸುವಂತೆ ನಾವು ಹಲವು ತಿಂಗಳಿಂದ ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದೇವೆ.
ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ
ಕಳೆದ ವಾರ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲಿಕ್ಕೆ ಮುಂದಾಗಿದ್ದಾಗಲೂ ಏಕಾಏಕಿ ವಶಕ್ಕೆ ಪಡೆದಿದ್ದರು. ಈಗ ಸಿಎಂ ಬರುತ್ತಾರೆ ನಮ್ಮನ್ನು ವಶಕ್ಕೆ ಪಡೆದಿದ್ದಾರೆ. ಸಿದ್ದರಾಮಯ್ಯನವರು ರೈತರನ್ನ ಕರೆಸಿ ಮಾತನಾಡಬಹುದಿತ್ತು. ಅದನ್ನ ಬಿಟ್ಟು ರೈತರನ್ನು ಬಂಧಿಸಿರುವುದು ನಾಚಿಕೆಗೇಡು. ಮುಂದಿನ ದಿನಗಳಲ್ಲಿ ಜನ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.