ಬೆಂಗಳೂರು:- ಸಂವಿಧಾನದ ಮೂಲಸ್ಪೂರ್ತಿಗೆ ವಿರುದ್ಧವಾಗದ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ X ನಲ್ಲಿ ಪೋಸ್ಟ್ ಮಾಡಿರುವ ಅವರು,ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸವನ್ನು ಮಾಡುವುದಿಲ್ಲ.
ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಯನ್ನು ಯಾವುದೇ ಕಾರಣಕ್ಕೂ ತಡೆಯುವ ಕೆಲಸವನ್ನು ಮಾಡುವುದಿಲ್ಲ. ನಾವು ಸಂವಿಧಾನದ ಮೂಲಸ್ಪೂರ್ತಿಗೆ ವಿರುದ್ಧವಾಗದಂತೆ ನಡೆಯುವ ಎಲ್ಲ ಅಭಿವ್ಯಕ್ತಿಗಳ ಪರವಾಗಿದ್ದೇವೆ. ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳಿವಳಿಕೆಯ ಕಾರಣಕ್ಕೆ ಒಂದೆರಡು ಅನಾವಶ್ಯಕವಾದ ಗೊಂದಲಗಳು ನಿರ್ಮಾಣವಾಗಿವೆ ಎಂಬುದು ನನ್ನ ಗಮನಕ್ಕೆ ಬಂದಿದೆ. ಈ ಕುರಿತು ಯಾವುದೇ ಗೊಂದಲಗಳು ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು ಎಂದು ನಾನು ಪೊಲೀಸ್ ಮಹಾನಿರ್ದೇಶಕರಿಗೆ ಸೂಕ್ತ ಸೂಚನೆಗಳನ್ನು ನೀಡಿರುತ್ತೇನೆ” ಎಂದಿದ್ದಾರೆ.
“ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಕೆಲಸಗಳ ಜೊತೆ ಸರ್ಕಾರವು ಸದಾ ನಿಲ್ಲುತ್ತದೆ ಎಂಬುದನ್ನು ತಿಳಿಯ ಸಬಯಸುತ್ತೇನೆ. ಆದ್ದರಿಂದ ಯಾವುದೇ ರೀತಿಯ ಗೊಂದಲಗಳನ್ನು ಸೃಷ್ಟಿಸಬಾರದು ಎಂದು, ಅಭಿವ್ಯಕ್ತಿ ಸ್ವಾತಂತ್ರ್ಯದ ವಿಚಾರದಲ್ಲಿ ಆತಂಕಿತ ಆಗಬಾರದೆಂದು ನಾಡಬಾಂಧವರಲ್ಲಿ ವಿನಂತಿಸುತ್ತೇನೆ” ಎಂದು ಕೋರಿದ್ದಾರೆ.