2024 ರ ಟಿ 20 ವಿಶ್ವಕಪ್ನಲ್ಲಿ ಮುಂಬೈ ಮೂಲದ ಆಟಗಾರರು ಭಾರತ ರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಅಮೂಲ್ಯ ಕೊಡುಗೆಗಳನ್ನು ನೀಡಿದ್ದರಿಂದ, ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಯಶಸ್ವಿ ಜೈಸ್ವಾಲ್ ಅವರಂತಹ ನಾಲ್ವರು ಆಟಗಾರರಿಗೆ ಬಹುಮಾನದ ಮೊತ್ತವನ್ನು ಘೋಷಿಸಿದ್ದಾರೆ.
ಡೆಂಗ್ಯೂ ಆರ್ಭಟ: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಕೇಸ್ಗಳು ಪತ್ತೆ!
ಮುಂಬೈ ಆಟಗಾರರಿಗೆ ಮಹಾರಾಷ್ಟ್ರ ಸರ್ಕಾರದಿಂದ 11 ಕೋಟಿ ರೂಪಾಯಿ ಹಾಗೂ ಭಾರತೀಯ ನಾಯಕ ರೋಹಿತ್ ಶರ್ಮಾ ಅವರಿಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಉಡುಗೊರೆಯಾಗಿ ನೀಡಿದರು
2024ರ ಐಸಿಸಿ ಟಿ20 ವಿಶ್ವಕಪ್ (T20 World Cup) ಗೆದ್ದ ಬಳಿಕ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಹಾಗೂ ತಂಡದ ಆಟಗಾರರು ಸಂಭ್ರಮದಲ್ಲಿದ್ದಾರೆ. ಬಾರ್ಬಡೋಸ್ನ ಬ್ರಿಜ್ಟೌನ್ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 7 ರನ್ಗಳಿಂದ ಸೋಲಿಸಿ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಎರಡನೇ ಟಿ 20 ಪ್ರಶಸ್ತಿ ಗೆದ್ದುಕೊಂಡಿತು. 2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) ಮುಂಬೈ ಆಟಗಾರರಾದ ಸೂರ್ಯಕುಮಾರ್ ಯಾದವ್ ಮತ್ತು ಶಿವಂ ದುಬೆ ಪ್ರಮುಖ ಪಾತ್ರ ವಹಿಸಿದ್ದರು. ರೋಹಿತ್ ತಂಡವನ್ನು ಮುನ್ನಡೆಸಿದರೆ ಸೂರ್ಯಕುಮಾರ್ ಮತ್ತು ದುಬೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.
2024ರ ಟಿ20 ವಿಶ್ವಕಪ್ ಗೆಲ್ಲುವಲ್ಲಿ ರೋಹಿತ್ ಶರ್ಮಾ ಪ್ರಮುಖ ಪಾತ್ರ ವಹಿಸಿದ್ದರು. ಅವರ ಬ್ಯಾಟಿಂಗ್ ಮಾತ್ರವಲ್ಲ, ತಂಡದ ನಾಯಕ ತಂಡವನ್ನು ಸಂವೇದನಾಶೀಲವಾಗಿ ಮುನ್ನಡೆಸಿದರು. ಅವರು 257 ರನ್ ಗಳಿಸಿದರು ಮತ್ತು ತಂಡದ ಪರ ಅತಿ ಹೆಚ್ಚು ರನ್ ಗಳಿಸಿದವರು