ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಹತ್ಯೆಗೈದ ಘಟನೆ ಕಲಬುರಗಿ ನಗರದ ಹೊರವಲಯದ ಕೆಸರಟಗಿಯಲ್ಲಿ ನಡೆದಿದೆ. ಕಪಿಲ್ ಗಾಯಕ್ವಾಡ್ (38) ಕೊಲೆಯಾದ ವ್ಯಕ್ತಿ. ದುಷ್ಕರ್ಮಿಗಳು ಪತ್ನಿಯ ಸಮ್ಮುಖದಲ್ಲೆ ಕಪಿಲ್ನನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆಗೈದಿದ್ದಾರೆ.
ಗಡಿಬಿಡಿಯಲ್ಲಿ ಗರ್ಭ ನಿರೋಧಕ ಮಾತ್ರೆಯನ್ನು ಹೀಗೆಲ್ಲಾ ತಿನ್ಬೇಡಿ: ಇಲ್ಲದಿದ್ರೆ ಪ್ರಾಣಕ್ಕೆ ಆಪತ್ತು!
ಸೆಂಟ್ರಿಂಗ್ ಕೆಲಸ ಮುಗಿಸಿಕೊಂಡು ಕೆಸರಟಗಿ ಬಳಿಯ ರೈಲ್ವೆ ಅಂಡರ್ ಬ್ರೀಡ್ಜ್ ಬಳಿ ತೆರಳುತ್ತಿರುವಾಗ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಪರಿಣಾಮ ಕಪಿಲ್ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹತ್ಯೆಗೀಡಾದ ಕಪೀಲ್ ಕುಟುಂಬಸ್ಥರು ಆತನ ಪತ್ನಿಯ ವಿರುದ್ಧ ಕೊಲೆ ಆರೋಪ ಮಾಡಿದ್ದಾರೆ. ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.