ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್ ಬಳಿ ರೈತನಿಗೆ ಅವಮಾನ ಹಾಗೋ ರೀತಿ ಸಿಬ್ಬಂದಿ ನಡೆದುಕೊಂಡಿದ್ದಾರೆ..
ಚಿಕ್ಕಮಗಳೂರು ಭಾಗದಲ್ಲಿ ಮಳೆ ಅಬ್ಬರ: ಪ್ರವಾಸ ಮುಂದೂಡುವಂತೆ ಜಿಲ್ಲಾಡಳಿತ ಮನವಿ!
ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಒಳಗೆ ಬಿಡದೆ ದರ್ಪ ತೋರಿದ್ದಾರೆ. ನಾಗರಾಜ್ ಎನ್ನುವರು ನಿನ್ನೆ ತಮ್ಮ ತಂದೆ ತಾಯಿಗೆ ಸಿನಿಮಾ ತೋರಿಸಲು ಬೆಂಗಳೂರಿನ ಮಾಗಡಿ ರಸ್ತೆ ಜಿಟಿ ಮಾಲ್ ಕರೆದೊಯ್ದಿದ್ದಾರೆ.
ಆದ್ರೆ, ನಾಗರಾಜ್ ತಮ್ಮ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅವರನ್ನು ಮಾಲ್ ಒಳಗೆ ಪ್ರವೇಶಿಸಲು ನಿರಾಕರಿಸಿದ್ದಾರೆ. ಪುತ್ರ ನಾಗರಾಜ್ ಎಂಬುವರು ಒಳಗೆ ಬಿಡಿ ಎಂದು ಇಷ್ಟು ಬಾರಿ ಕೇಳಿದರು ಪಂಚೆ ಹಾಕೊಂಡಿದ್ದಾರೆ. ಮಾಲ್ ನಲ್ಲಿ ಪಂಚೆ ಹಾಕಿದವರನ್ನು ಬಿಡುವುದಿಲ್ಲ ಎಂದು ಸಿಬ್ಬಂದಿ ತಮ್ಮದೇ ಮೊಂಡು ವಾದ ಮಾಡಿದ್ದಾರೆ. ಅಲ್ಲದೇ ನಮ್ಮ ಮಾಲಿನಲ್ಲಿ ಈ ರೀತಿ ರೂಲ್ಸ್ ಇದೆ ಎಂದು ಪ್ರವೇಶ ದ್ವಾರದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿದ್ದರು. ಈ ವಿಡಿಯೋ ವೈರಲ್ ಆಗಿದೆ.