ಬೆಂಗಳೂರು:– ಬಾಗಲಗುಂಟೆ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವನ್ನಪ್ಪಿದ ಘಟನೆ ಜರುಗಿದೆ.
IPL 2024: ಅದೃಷ್ಟ ಹೀಗಾದ್ರೆ RCB ಮತ್ತು CSK, ಎರಡೂ ತಂಡಗಳು ಪ್ಲೇಆಫ್ ಗ್ಯಾರಂಟಿ!
28 ವರ್ಷದ ಅಮಿತ್ ಕುಮಾರ್ ಮೃತ ದುರ್ದೈವಿ ಎನ್ನಲಾಗಿದೆ. ಅಮಿತ್ ಕುಮಾರ್ ಜಿಮ್ ಟ್ರೈನರ್ ಆಗಿದ್ದು, 10 ವರ್ಷದ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ. ಒಂದು ವರ್ಷದ ಹಿಂದೆ ಜಿಮ್ ಸಮೀಪವೇ ಓರ್ವ ಯುವತಿಯನ್ನು ಪ್ರೀತಿಸಿದ್ದ. ಪೋಷಕರ ವಿರೋಧದ ನಡುವೆ ವಿವಾಹವಾಗಿದ್ದರು. ಪತ್ನಿ ನರ್ಸಿಂಗ್ ಕೋರ್ಸ್ ಸೇರಿದ ಬಳಿಕ ಪತಿಗೆ ಸಮಯ ನೀಡುತ್ತಿರಲಿಲ್ಲ ಎನ್ನಲಾಗುತ್ತಿದ್ದು, ಫ್ರೆಂಡ್ಸ್ ಜೊತೆ ಪದೇ ಪದೇ ಫೋನ್ ಕಾಲ್ನಲ್ಲಿರುತ್ತಿದ್ದಳು ಎನ್ನಲಾಗಿದೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು.
ಹೀಗಾಗಿ ಪತಿ ತೊರೆದ ಪತ್ನಿ ಬೇರೆಡೆ ವಾಸವಿದ್ದರು. ಮನೆಗೆ ಪತ್ನಿ ವಾಪಾಸ್ ಬರುವಂತೆ ಪತಿ ಅಮಿತ್ ಪದೇ ಪದೇ ಕರೆ ಮಾಡಿ ಮನವಿ ಮಾಡುತ್ತಿದ್ದ. ನಿನ್ನೆ ಕೂಡ ವಿಡಿಯೋ ಕಾಲ್ನಲ್ಲಿರುವಾಗಲೇ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಸಾವನ್ನಪ್ಪಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಗೆ ಅಮಿತ್ ಕುಮಾರ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಇಂದು ವಿಕ್ಟೋರಿಯಾದಲ್ಲಿ ಮರಣೋತ್ತರ ಪರೀಕ್ಷೆ ನಡೆಯಲಿದೆ