ವಿಜಯನಗರ: ಮುಖ್ಯ ಶಿಕ್ಷಕಿಯೊಬ್ಬರು ಹೋಮ್ವರ್ಕ್ ಮಾಡದಿದ್ದಕ್ಕೆವಿದ್ಯಾರ್ಥಿನಿಗೆ ಕಾಲು ಊದಿಕೊಳ್ಳುವಂತೆ ಥಳಿಸಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದ ಕಸ್ತೂರ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ನಡೆದಿದೆ. ವಿಜ್ಞಾನ ವಿಷಯದ ಹೋಂ ವರ್ಕ್ ಮಾಡದಿದ್ದಕ್ಕೆ ಮುಖ್ಯ ಶಿಕ್ಷಕಿ ವಾಣಿ ಎಂಬುವವರು ವಿದ್ಯಾರ್ಥಿನಿಗೆ ಮನಬಂದಂತೆ ಹೊಡೆದಿದ್ದಾರೆ.
ಮಾನಸ ಎಂಬಾಕೆಗೆ ಈ ಮೊದಲು ಅಪಘಾತ ಆಗಿದ್ದರಿಂದ ಕಾಲಿಗೆ ರಾಡ್ ಅಳವಡಿಸಲಾಗಿತ್ತು. ಮತ್ತೆ ಅದೇ ಕಾಲಿಗೆ ಶಿಕ್ಷಕಿ ವಾಣಿ ಸ್ಕೇಲ್ನಿಂದ ಜೋರಾಗಿ ಹೊಡೆದಿದ್ದಾರೆ. ಜೋರಾಗಿ ಹೊಡೆತದಿಂದಾಗಿ ಕಾಲು ಊದಿಕೊಂಡು ಬಾಲಕಿಗೆ ನಡೆದಾಡುವುದಕ್ಕೂ ಸಾಧ್ಯವಾಗಿಲ್ಲ.
ನಿಮಗೆ ಗೊತ್ತೇ..? ಜಸ್ಟ್ ಈ ಆಹಾರಗಳಿಂದ ನಿಮ್ಮ ಹೃದಯನ್ನು ಆರೋಗ್ಯವಾಗಿಟ್ಟುಕೊಳ್ಳಬಹುದು..!
ಇನ್ನೂ ಮನಸೋ ಇಚ್ಛೆ ಥಳಿಸಿದ ಶಿಕ್ಷಕಿ ವಾಣಿಯೇ ಬಾಲಕಿಯನ್ನು ಚಿತ್ರದುರ್ಗದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎಲುಬು ಮತ್ತು ಮೂಳೆ ತಜ್ಞರಿಂದ ತಪಾಸಣೆ ಮಾಡಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಾಲಕಿಯ ಕಾಲಿಗೆ ಬ್ಯಾಂಡೇಜ್ ಹಾಕಿ ಸೂಕ್ತ ಚಿಕಿತ್ಸೆ ನೀಡಿ ವೈದ್ಯರು ಕಳಿಸಿದ್ದಾರೆ. ಇತ್ತ ಬಾಲಕಿಯನ್ನು ನೋಡಲೆಂದು ಪಾಲಕರು ಭಾನುವಾರ ಶಾಲೆಗೆ ಬಂದಿದ್ದಾರೆ. ಆಗಲೇ ಮಗಳ ಕಾಲಿನ ಸ್ಥಿತಿ ನೋಡಿ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಪೋಷಕರು ಬಳಿಕ ಮುಖ್ಯ ಶಿಕ್ಷಕಿ ವಾಣಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.