ಬೆಂಗಳೂರು: ಅನಧಿಕೃತ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಆರೋಗ್ಯ ಇಲಾಖೆ ಮುಂದಾಗಿದೆ. ಹೌದು ಈ ಸಂಬಂಧ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, KPME ಕಾಯ್ದೆ ನಿಯಮ 5ರ ಪ್ರಕಾರ, ಸಾರ್ವಜನಿಕರ ಮಾಹಿತಿಗಾಗಿ ವೈದ್ಯಕೀಯ ಪದ್ಧತಿ ಮತ್ತು ಲಭ್ಯವಿರುವ ಸೇವೆಗಳ ವಿವರವನ್ನು ಆಸ್ಪತ್ರೆಯ ಆವರಣದ ಪ್ರಮುಖ ಸ್ಥಳಗಳಲ್ಲಿ ಸ್ಪಷ್ಟವಾಗಿ ಪ್ರದರ್ಶಿಸಬೇಕು ಎಂದು ಸೂಚಿಸಿದೆ. ಕೆಲ ಖಾಸಗಿ ಆಸ್ಪತ್ರೆ, ಕ್ಲಿನಿಕ್ಗಳು ಸಾಂಪ್ರದಾಯಿಕ ಹಾಗೂ ಪಾರಂಪರಿಕ ಪದ್ಧತಿ,
Muskmelon Seeds: ಕರ್ಬೂಜ ಹಣ್ಣಿನ ಬೀಜಗಳಿಂದ ಎಷ್ಟೆಲ್ಲಾ ಅದ್ಭುತ ಪ್ರಯೋಜನಗಳಿವೆ ಗೊತ್ತಾ..?
ಮನೆ ಮದ್ದುಗಳು, ಬಾಡಿ ಮಸಾಜ್ ಹಾಗೂ ವಿವಿಧ ಥೆರಪಿಗಳ ಅನಧಿಕೃತ ಅಭ್ಯಾಸದಲ್ಲಿ ತೊಡಗಿಕೊಂಡಿರುವುದು ಗಮನಕ್ಕೆ ಬಂದಿದೆ. ಇವುಗಳು ಕೆಪಿಎಂಇ ಕಾಯ್ದೆ ಅಡಿಯಲ್ಲಿ ವೈದ್ಯಕೀಯ ಚಿಕಿತ್ಸೆಗಳಾಗಿ ವರ್ಗೀಕರಿಸಲ್ಪಟ್ಟಿಲ್ಲ. ಆದ್ದರಿಂದ ಎಲ್ಲ ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್ಗಳು ಹೊರಭಾಗದಲ್ಲಿ ಮಾಹಿತಿ ಫಲಕವನ್ನು ಹಾಕಬೇಕು. ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದ ಆಸ್ಪತ್ರೆಗಳು ಹಸಿರು ಬಣ್ಣ ಸೂಚಿತ ಫಲಕವನ್ನು ಬಳಸಬೇಕು. ಈ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು ಎಂದು ತಿಳಿಸಲಾಗಿದೆ.
![](https://ainlivenews.com/wp-content/uploads/2024/01/Ad-Banner-copy-scaled.jpg)