ನವದೆಹಲಿ:– ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಊರಿನಿಂದ ಬಹಿಷ್ಕಾರ ಹಾಕಿದ್ದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!
ಈ ಸಂಬಂಧ ಮಾತನಾಡಿದ ಅವರು,ಮುಡಾ ಪ್ರಕರಣ ದೇಶದ್ಯಾಂತ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಡಿಎನ್ಎಯಲ್ಲಿ ಭ್ರಷ್ಟಾಚಾರ ಇದೆ ಎಂದು ಹಿಂದೆಯೇ ಹೇಳಿದ್ದೆ. ಅದಕ್ಕೆ ಪೂರಕವಾದ ಆದೇಶವನ್ನು ಹೈಕೋರ್ಟ್ ನೀಡಿದೆ. ಮೇಲ್ನೋಟಕ್ಕೆ ಮುಖ್ಯಮಂತ್ರಿಗಳು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಹೈಕೋರ್ಟ್ ಹೇಳಿದೆ ಎಂದರು.
ಹೈಕೋರ್ಟ್ ಆದೇಶದಲ್ಲಿ ಸಿಎಂ ನಿಯಮಗಳನ್ನು ಗಾಳಿಗೆ ತೂರಿ, ಅಕ್ರಮ ಮಾಡಿದ್ದಾರೆ ಎಂದು ಸ್ಪಷ್ಟವಾಗಿ ಹೈಕೋರ್ಟ್ ಹೇಳಿದೆ. ಸಾಮಾನ್ಯ ವ್ಯಕ್ತಿಗೆ ಈ ಪ್ರಮಾಣದಲ್ಲಿ ಪರಿಣಾಮ ನೀಡಲು ಸಾಧ್ಯವಿಲ್ಲ. ಹೈಕೋರ್ಟ್ ಆದೇಶದ ಹಿನ್ನಲೆ ಮುಖ್ಯಮಂತ್ರಿ ಸ್ಥಾನಕ್ಕೆ ತಡ ಮಾಡದೇ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದರು.
ದಲಿತರ ಕೋಟಿ ಬೆಲೆ ಬಾಳುವ ಭೂಮಿಯನ್ನು ಲಕ್ಷಗಳಲ್ಲಿ ಖರೀದಿಸಿ, ಸಿಎಂ ಹೆಂಡ್ತಿಗೆ ಗಿಫ್ಟ್ ನೀಡುವುದು ಹಾಸ್ಯಾಸ್ಪದ, ಇಲ್ಲಿ ದೊಡ್ಡ ಭ್ರಷ್ಟಾಚಾರ ನಡೆದಿದೆ. ರಾಜ್ಯಪಾಲರು, ದಲಿತ ನಾಯಕರಿಗೆ ಚಪ್ಪಲಿಯಿಂದ ಹೊಡೆಸುವ ಯತ್ನ ಮಾಡಿದೆ. ಈಗಲಾದರೂ ಸಿಎಂ ಬಹಿರಂಗ ಕ್ಷಮೆ ಕೇಳುವ ಮೂಲಕ ರಾಜೀನಾಮೆ ನೀಡಬೇಕು ಎಂದು ಕಿಡಿಕಾರಿದ್ದಾರೆ.