ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಂಡಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದಲ್ಲಿ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದ ಜಾಮೀನು ಅರ್ಜಿಯನ್ನು ಸಹ ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿದೆ.
ಮೂರು ಅತ್ಯಾಚಾರ ಕೇಸ್, ಒಂದು ಅಶ್ಲೀಲ ದೃಶ್ಯ ಪ್ರಕರಣದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿತ್ತು. ಆದ್ರೆ ನಾಲ್ಕನೆ ಪ್ರಕರಣದ ಜಾಮೀನಿ ಅರ್ಜಿಯ ಆದೇಶವನ್ನು ಕಾಯ್ದಿರಿಸಿತ್ತು. ಇಂದು ಹೈಕೋರ್ಟ್, ಪ್ರಜ್ವಲ್ ರೇವಣ್ಣ ವಿರುದ್ಧ 4ನೇ ಪ್ರಕರಣ ಜಾಮೀನು ಅರ್ಜಿಯನ್ನು ಸಹ ವಜಾಗೊಳಿಸಿ ಆದೇಶ ಹೊರಡಿಸಿದೆ.
Black Pepper Side Effects: ಕರಿಮೆಣಸು ಅತಿಯಾಗಿ ಸೇವಿಸುವುದರಿಂದ ಆಗುವ ಸೈಡ್ ಎಫೆಕ್ಟ್ʼಗಳೇನು ಗೊತ್ತಾ..?
ಅಶ್ಲೀಲ ದೃಶ್ಯ ಪ್ರಕರಣ ಸೇರಿದಂತೆ ಇತರೆ ಒಟ್ಟು ನಾಲ್ಕು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ ಆಗಸ್ಟ್ನಲ್ಲಿ 2,144 ಪುಟಗಳ ಚಾರ್ಜ್ಶೀಟ್ ಸಲ್ಲಿಸಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಸಹ ಜಾಮೀನಿಗಾಗಿ ಕೆಳಗಿನ ಕೋರ್ಟ್ನಲ್ಲಿ ಕಸರತ್ತು ನಡೆಸಿದ್ದರು. ಆದ್ರೆ, ಅದು ಸಾಧ್ಯವಾಗಿಲ್ಲ, ಈಗ ಹೈಕೋರ್ಟ್ ಸಹ ನಾಲ್ಕಕ್ಕೆ ನಾಲ್ಕು ಪ್ರಕರಣದ ಜಾಮೀನು ಅರ್ಜಿಯನ್ನು ತಿರಸ್ಕೃತ ಮಾಡಿದೆ. ಸದ್ಯಕ್ಕೆ ಪರಪ್ಪನ ಅಗ್ರಹಾರವೇ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಫಿಕ್ಸ್ ಆಗಿದೆ.