ಬೆಂಗಳೂರು:- ಗುತ್ತಿಗೆ ಅವಧಿಗೂ ಗ್ರ್ಯಾಚ್ಯುಟಿ ಪಾವತಿಸಬೇಕು ಎಂದು ಬೆಂಗಳೂರು ಹೈಕೋರ್ಟ್ ಹೇಳಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ನಿವೃತ್ತ ಸರಕಾರಿ ಶಾಲಾ ಶಿಕ್ಷಕ ಬಸವೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ ಈ ಆದೇಶವನ್ನು ನೀಡಿದೆ. ಗ್ರಾಚ್ಯುಟಿ ಮಿತಿ ಏರಿಕೆ ಆದೇಶ ಇನ್ನಷ್ಟು ವಲಯಕ್ಕೆ ವಿಸ್ತರಣೆ ಹೈಕೋರ್ಟ್ ಏನು ಹೇಳಿದೆ? ಅರ್ಜಿದಾರರಿಗೆ 50 ಸಾವಿರ ರೂ. ವ್ಯಾಜ್ಯ ವೆಚ್ಚ ಸೇರಿದಂತೆ ಒಟ್ಟು 2.44 ಲಕ್ಷ ರೂ. ಗ್ರ್ಯಾಚ್ಯುಟಿ ಪಾವತಿ ಮಾಡುವಂತೆ ಸರ್ಕಾರಕ್ಕೆ ಆದೇಶ ನೀಡಿ ಅರ್ಜಿಯನ್ನು ವಿಲೇವಾರಿ ಮಾಡಿದೆ. ಗ್ರಾಚ್ಯುಟಿ ಎಂದರೇನು? ಗ್ರಾಚ್ಯುಟಿ ಲೆಕ್ಕ ಹಾಕುವುದು ಹೇಗೆ? “ಗ್ರ್ಯಾಚ್ಯುಟಿ ಪಾವತಿ ಸಂಬಂಧ ಗ್ರ್ಯಾಚ್ಯುಟಿ ಪಾವತಿ ಕಾಯಿದೆ 1972 ಕಾಯಂ ಸರಕಾರಿ ನೌಕರ ಮತ್ತು ಗುತ್ತಿಗೆ ನೌಕರರ ನಡುವೆ ಯಾವುದೇ ವ್ಯತ್ಯಾಸವನ್ನು ಮಾಡುವುದಿಲ್ಲ. ಹಾಗಾಗಿ 75 ವರ್ಷದ ನಿವೃತ್ತ ಸರ್ಕಾರಿ ನೌಕರರಾಗಿರುವ ಅರ್ಜಿದಾರರಿಗೆ ನಾಲ್ಕು ವಾರದಲ್ಲಿ ಬಾಕಿ ಇರುವ ಗ್ರ್ಯಾಚ್ಯುಟಿ ಹಣವನ್ನು ಪಾವತಿಸಬೇಕು” ಎಂದು ಕೋರ್ಟ್ ಆದೇಶಿಸಿದೆ
ಸುಪ್ರೀಂಕೋರ್ಟ್ ಹಲವು ಪ್ರಕರಣಗಳಲ್ಲಿ ಗ್ರ್ಯಾಚ್ಯುಟಿ ಪಾವತಿ ಕಾಯ್ದೆಯ ನಿಯಮಗಳು ಸದಾ ನೇಮಕ ಮತ್ತು ಸೇವಾ ಷರತ್ತಿನ ನಿಯಮಗಳಿಗೆ ವ್ಯತಿರಿಕ್ತವಾಗಿರುತ್ತದೆ. ಹಾಗಾಗಿ ಸರ್ಕಾರ ಗ್ರ್ಯಾಚ್ಯುಟಿ ಪಾವತಿ ಮಾಡಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.