ಬೆಂಗಳೂರು: ಚಿತ್ರದುರ್ಗದ ಭೋವಿ ಮಠದಲ್ಲಿ ರಾಜಕೀಯ ಭಾಷಣ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇರೆಗೆ ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ವಿರುದ್ಧ ಚಿತ್ರದುರ್ಗ ಗ್ರಾಮಾಂತರ ಪೊಲೀಸರು ದಾಖಲಿಸಿದ್ದ ಎಫ್ಐಆರ್ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಎಫ್ಐಆರ್ ರದ್ದು ಕೋರಿ ಬಿ.ವೈ.ರಾಘವೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
Rama Navami 2024: ರಾಮ ನವಮಿ ಯಾವಾಗ.? ಪೂಜಾ ವಿಧಿ ವಿಧಾನ, ಮಹತ್ವ ತಿಳಿಯಿರಿ
ಅರ್ಜಿದಾರರ ಪರ ವಕೀಲ ಸಂದೀಪ್ ಎಸ್. ಪಾಟೀಲ್, ‘ ಅರ್ಜಿದಾರರು ಎಸಗಿದ್ದಾರೆನ್ನಲಾದ ಅಪರಾಧಗಳ ಕುರಿತು ಎಫ್ಐಆರ್ನಲ್ಲಿ ಮಾಹಿತಿ ನೀಡಿಲ್ಲ. ಹಾಗಾಗಿ, ಕ್ರಿಮಿನಲ್ ಪ್ರಕ್ರಿಯೆ ಮುಂದುವರಿಸಿದರೆ ಕಾನೂನಿಗೆ ವಿರುದ್ಧವಾಧಿಗಿ ನಡೆದಂತಾಗುತ್ತದೆ. ಈ ಕಾರಣದಿಂದ ಎಫ್ಐಆರ್ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳನ್ನು ರದ್ದುಗೊಳಿಸಬೇಕು. ಅರ್ಜಿ ಇತ್ಯರ್ಥವಾಗುವವರೆಗೆ ಎಫ್ಐಆರ್ಗೆ ಮಧ್ಯಂತರ ತಡೆ ನೀಡಬೇಕು’ ಎಂದು ಮನವಿ ಮಾಡಿದರು.