ಹಾನಗಲ್;- ತಾರಕೇಶ್ವರ ಪಲ್ಲಕ್ಕಿ ಉತ್ಸವಕ್ಕೆ ಅಡ್ಡಿಪಡಿಸಿದ್ದ ಮುಸ್ಲಿಂ ಮೂಲಭೂತವಾದಿಗಳ ಕೃತ್ಯ ಖಂಡಿಸಿ ಇಂದು ಹಾನಗಲ್ ನಗರದಲ್ಲಿ ಪಾದಯಾತ್ರೆ ನಡೆಸಲಾಯಿತು.
“ಹಾನಗಲ್ ಚಲೋ” ತಾರಕೇಶ್ವರ ಪಲ್ಲಕ್ಕಿ ಶೋಭಾ ಯಾತ್ರೆಯಲ್ಲಿ ಮೂರು ಸಾವಿರ ಮಠದ ಜಗದ್ಗುರು ಗುರುಸಿದ್ದ ರಾಜಯೋಗೇಂದ್ರ,ಕೂಡಲದ ಗುರು ಮಹೇಶ್ವರ ಶಿವಾಚಾರ್ಯ ಶ್ರೀಗಳು, ಅಕ್ಕಿಆಲೂರಿನ ವಿರಕ್ತಮಠದ ಶಿವಬಸವ ಶ್ರೀಗಳು,ಬಿಜೆಪಿ ಜಿಲ್ಲಾಧ್ಯಕ್ಷರಾದ ಸಿದ್ದರಾಜ ಕಲಕೋಟಿ, ಮಾಜಿ ಶಾಸಕರಾದ ಶಿವರಾಜ ಸಜ್ಜನರ, ಗವಿಸಿದ್ದಪ್ಪ ದ್ಯಾಮಣ್ಣವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣ ಈಳಗೇರ, ಶಶಿಧರ ಹೊಸಳ್ಳಿ, ರುದ್ರೇಶ್ ಚಿನ್ನಣ್ಣನವರ, ಪ್ರಮುಖರಾದ ಕಲ್ಯಾಣ ಕುಮಾರ ಶೆಟ್ಟರ, ಕೆ ಶಿವಲಿಂಗಪ್ಪ, ದೀಪಕ್ ಹರಪನಹಳ್ಳಿ, ಬಸವರಾಜ ಕೇಲಗಾರ, ಶಿವಾನಂದ ಮ್ಯಾಗೇರಿ, ಗಂಗಾಧರ ಬಾಣದ, ನಿಂಗಪ್ಪ ಗೊಬ್ಬೇರ, ಮಾಲತೇಶ್ ಸೊಪ್ಪಿನ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ರಮೇಶ್ ಪಾಲನಕರ ಹಾಗೂ ಸಾವಿರಾರು ಹಿಂದೂ ಸಮಾಜ ಬಾಂಧವರು, ಹಿಂದೂ ಸಂಘಟನೆಗಳ ಪ್ರಮುಖರು, ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.