ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯವಾಡದೆ ಇರಲು ಕಾರಣ ಏನೆಂಬುವುದನ್ನು ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.
Karnataka weather: ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ…!
ಶನಿವಾರ ನಡೆದಿದ್ದ ಪಂದ್ಯದಲ್ಲಿ ಟಾಸ್ ಗೆದ್ದಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟ್ ಮಾಡಿದ್ದರು. ಈ ವೇಳೆ ರೋಹಿತ್ ಶರ್ಮಾ ಭಾರತ ತಂಡದ ಪ್ಲೇಯಿಂಗ್ XI ಅನ್ನು ಪ್ರಕಟಿಸಿದರು. ಈ ವೇಳೆ ವಿರಾಟ್ ಕೊಹ್ಲಿ ಆಡದೆ ಇರುವ ಬಗ್ಗೆ ರೋಹಿತ್ ಶರ್ಮಾ ಬಹಿರಂಗಪಡಿಸಿದರು. ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಈ ಕಾರಣದಿಂದ ಅವತರು ಅಭ್ಯಾಸ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಟೀಮ್ ಇಂಡಿಯಾ ನಾಯಕ ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ ಜೊತೆಗೆ ಯಶಸ್ವಿ ಜೈಸ್ವಾಲ್ ಅವರಿಗೂ ಕೂಡ ವಿಶ್ರಾಂತಿ ನೀಡಲಾಗಿತ್ತು. ಆ ಮೂಲಕ ನಾಯಕ ರೋಹಿತ್ ಶರ್ಮಾ ಜೊತೆಗೆ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸಿದರು. ಮೂರನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಬ್ಯಾಟ್ ಮಾಡಿದರು ಹಾಗೂ ಸ್ಪೋಟಕ ಅರ್ಧಶತಕವನ್ನು ಸಿಡಿಸಿದರು. ಆದರೆ, ಸಂಜು ಸ್ಯಾಮ್ಸನ್ 6 ಎಸೆತಗಳಲ್ಲಿ ಕೇವಲ ಒಂದು ರನ್ ಗಳಿಸಿ ಎಲ್ಬಿಡಬ್ಲ್ಯು ಬಲೆಗೆ ಬಿದ್ದರು. ಆ ಮೂಲಕ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ವಿಫಲರಾದರು.
ಅಂದ ಹಾಗೆ ವಿರಾಟ್ ಕೊಹ್ಲಿ ಶುಕ್ರವಾರ ನ್ಯೂಯಾರ್ಕ್ ಬಂದಿದ್ದರು. ಆದರೆ, ಭಾರತ ತಂಡದ ಮೊದಲ ಗುಂಪಿನ ಜೊತೆ ವಿರಾಟ್ ಕೊಹ್ಲಿ ಪ್ರಯಾಣ ಬೆಳೆಸಿರಲಿಲ್ಲ. ಏಕೆಂದರೆ ವಿರಾಟ್ ಕೊಹ್ಲಿಯ ವೀಸಾ ಸಂಬಂಧಿಸಿದಂತೆ ಕಾಗದದ ಕೆಲಸಗಳು ಬಾಕಿ ಇತ್ತು. ಆದರೆ, ವಿರಾಟ್ ಕೊಹ್ಲಿ ತಮ್ಮ ಕುಟುಂಬ ಹಾಗೂ ಸ್ನೇಹಿತರ ಜೊತೆ ಸಮಯವನ್ನು ಕಳೆಯುತ್ತಿದ್ದರು.