ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ನಗರಗೆರೆ ಹೋಬಳಿ ವ್ಯಾಪ್ತಿಯ ಚೋಳಶೆಟ್ಟಿಹಳ್ಳಿ ಗ್ರಾಮದ ವಾಸಿಯಾದ ರಾಮಕೃಷ್ಣಪ್ಪ.ಸಿ.ವಿ. (೪೬) ಎಂಬುವವರನ್ನು ವೈಯಕ್ತಿಕ ದ್ವೇಷದ ಹಿನ್ನೆಲೆ ಸಂಬಂಧಿಕರಿಂದ ಕೊಲೆಯಾದ ಘಟನೇ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಗೌರಿಬಿದನೂರು ತಾಲ್ಲೂಕಿನ ಜಿ.ಕೊತ್ತೂರು ಗ್ರಾಮ ಪಂಚಾಯಿತಿ ಉಪಾದ್ಯಕ್ಷೆಯಾದ ಗಂಗರತ್ನಮ್ಮ ರವರ ಪತಿ ಮೃತ ದರ್ಯ ದೈವಿಯಾಗಿದ್ದು, ಈತ ಎಂದಿನಂತೆ ಚೋಳಶೆಟ್ಟಿಹಳ್ಳಿ ಗ್ರಾಮದ ಹಾಲು ಡೈರಿಗೆ ಬೆಳಿಗ್ಗೆ ಹಾಲು ಹಾಕಲು ಹೋಗಿದ್ದು, ಈ ಸಮಯದಲ್ಲಿ ಅಣ್ಣನ ಮಗ ನಾಗರಾಜು(ಅಲ್ಲೂರು) ಮಚ್ಚಿನಿಂದ ಏಕಾ ಏಕಿ ದಾಳಿ ಮಾಡಿದ್ದಾನೆ. ತೆಲೆಗೆ ತೀವ್ರವಾಗಿ ಗಾಯವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಆರೋಪಿ ಪರಾರಿಯಾಗಿದ್ದಾನೆ..
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಮಾಡಲು ಸುವರ್ಣವಾಕಾಶ..! SBIನಲ್ಲಿ ಖಾಲಿಯಿದೆ 8283 ಹುದ್ದೆಗಳು
ಸ್ಥಳಕ್ಕೆ ಜಿಲ್ಲಾ ವರಿಷ್ಠಾಧಿಕಾರಿ ನಾಗೇಶ್, ಗೌರೀಬಿದನೂರು ಸರ್ಕಲ್ ಇನ್ಸ್ ಪೆಕ್ಟರ್ ಸತ್ಯನಾರಾಯಣ, ಗೌರಿಬಿದನೂರು ಗ್ರಾಮಾಂತರ ಪೊಲೀಸರು ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೊಲೆ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ