ಕೋಲಾರ:- ಮಾಲೂರಿನ ಯಳವಳ್ಳಿ ವಸತಿ ಶಾಲೆಯಲ್ಲಿ ಮಕ್ಕಳಿಂದ ಶೌಚಗುಂಡಿ ಸ್ವಚ್ಛತೆ ಮಾಡಿಸಿರುವ ಘಟನೆ ಖಂಡನೀಯ ಮತ್ತು ಹೇಯಕೃತ್ಯ ಎಂದು ಮಾನ್ಯ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರು ಹಾಗೂ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್ ಸುರೇಶ್ ಅವರು ತಿಳಿಸಿದರು.
ಇಂದು ಮಾಲೂರಿನ ಯಳವಳ್ಳಿ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ್ ಅವರು ಅಧಿಕಾರಿಗಳು, ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ವರ್ಗದ ಜೊತೆ ಮಾತನಾಡಿದ ಅವರು, ಮಕ್ಕಳನ್ನು ಶೌಚಗುಂಡಿ ಸ್ವಚ್ಛತೆಗೆ ಇಳಿಸಿದ ಘಟನೆಯನ್ನು ತೀವ್ರವಾಗಿ ಖಂಡಿಸಿದರು.
ಈ ಪ್ರಕರಣ ನಾಗರೀಕ ಸಮಾಜ ತಲೆ ತಗ್ಗಿಸುವ ಹೇಯಕೃತ್ಯವಾಗಿದೆ. ತಪ್ಪು ಮಾಡಿದವರ ವಿರುದ್ದ ಈಗಾಗಲೇ ಪ್ರಕರಣ ದಾಖಲು ಮಾಡಲಾಗಿದೆ. ವಿಚಾರಣೆ ವೇಳೆ ಇನ್ನು ಯಾವುದಾದರೂ ಅಧಿಕಾರಿಗಳ ಲೋಪ ಕಂಡು ಬಂದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದರು.
ಪ್ರಸ್ತುತ ವಸತಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಯನ್ನು ಶಿಕ್ಷೆಯ ಮೇಲೆ ವರ್ಗಾವಣೆಗೊಳಿಸಲಾಗುವುದು. ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಶಿಕ್ಷಣದ ಗುಣ ಮಟ್ಟಕ್ಕೆ ಧಕ್ಕೆಯಾಗದಂತೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮಕ್ಕಳ ರಕ್ಷಣ ಘಟಕದ ಅಧಿಕಾರಿಗಳು ಸೂಕ್ತ ಸಮಯಕ್ಕೆ ಸರ್ಕಾರಕ್ಕೆ ಮಾಹಿತಿ ನೀಡದೆ ಮುಚ್ಚಿಡುವ ಪ್ರಯತ್ನ ಮಾಡಿದ್ದಾರೆ. ಇಂತಹ ಪ್ರಕರಣದಲ್ಲಿ ಯಾರನ್ನು ರಕ್ಷಿಸುವ ಪ್ರಮೇಯವೇ ಉಂಟಾಗುವುದಿಲ್ಲ, ಅಂತವರ ವಿರುದ್ಧ ಯಾವುದೇ ಮುಲಾಜು ಇಲ್ಲದೆ, ಕಾನೂನು ಕ್ರಮ ಜರುಗಿಸಲಾಗುವುದು. ಎಂದರು ಹೇಳಿದರು.
ಮಾಲೂರಿನ ಶಾಸಕರಾದ ಕೆ.ವೈ ನಂಜೇಗೌಡ ಅವರು ಮಾತನಾಡಿ ಸದರಿ ವಿಷಯ ನನ್ನ ಗಮನಕ್ಕೆ ತರಲಾಗಿತ್ತು, ಈ ಹಿನ್ನಲೆಯಲ್ಲಿ ಶುಕ್ರವಾರದಂದು ವಸತಿ ಶಾಲೆಗೆ ಭೇಟಿ ನೀಡಿ ಸಿಬ್ಬಂದಿ ಮತ್ತು ಮಕ್ಕಳ ಜೊತೆ ಮಾತು ಕತೆ ನಡೆಸಿ ಪರಿಸ್ಥಿತಿಯ ಅಧ್ಯಯನ ಮಾಡಿದ್ದೇನೆ. ಇಡೀ ಶಾಲೆಯಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಈ ಬಗ್ಗೆ ಸಂಬAಧಿಸಿದವರಿಗೆ ಸೂಕ್ತ ಎಚ್ಚರಿಕೆಯನ್ನು ನೀಡಿದ್ದೇನೆ ಎಂದರು.
ಮಾನ್ಯ ಸಚಿವರೊಂದಿಗೆ ಪರಿಶೀಲನಾ ಸ್ಥಳದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿಗಳಾದ ಶ್ರೀಮತಿ ಪದ್ಮ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಎಂ.ನಾರಾಯಣ, ಉಪ ವಿಭಾಗಾಧಿಕಾರಿಗಳಾದ ವೆಂಕಟಲಕ್ಷಿö್ಮÃ, ಸೇರಿದಂತೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.