ಬೆಂಗಳೂರು;- ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ 5 ವರ್ಷಗಳ ಕಾಲ ಸಿಎಂ ಆಗಿ ಮುಂದುವರಿಯಬೇಕೋ ಬೇಡ್ವೋ ಎಂಬುದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ ನಡುವೆ ಪೈಪೋಟಿ ನಡೆದಿದೆ. ಇಬ್ಬರ ನಡುವೆ ಅಧಿಕಾರ ಹಂಚಿಕೆಯಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿರುವುದು ನೋಡಿದ್ದೇನೆ. ಆದರೆ ನಾಯಕರ ಮಧ್ಯೆ ಅಂತಹ ಯಾವುದೇ ಅಧಿಕಾರ ಹಂಚಿಕೆ, ಅಸಮಾಧಾನ, ಭಿನ್ನಾಭಿಪ್ರಾಯ ಇಲ್ಲ ಎಂದರು.
ಸಿದ್ದರಾಮಯ್ಯ ಜನಪರ ಕೆಲಸ ಮಾಡುತ್ತಿದ್ದಾರೆ. ಒಳ್ಳೆಯ ಆಡಳಿತ ನೀಡುತ್ತಿದ್ದಾರೆ. ನಾವೆಲ್ಲರೂ ಸಿದ್ದರಾಮಯ್ಯನವರ ಜೊತೆಗಿದ್ದೇವೆ. ಅದ್ಯಾಗೂ ಸಿಎಂ ಐದು ವರ್ಷ ಮುಂದುವರಿಯಬೇಕೋ, ಬದಲಾವಣೆ ಮಾಡಬೇಕೋ ಎಂಬ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದರು.
