ನವದೆಹಲಿ: ರೇಷನ್ ಕಾರ್ಡ್ ಪರಿಷ್ಕರಣೆ ಮಾಡುವ ಮೊದಲು ರಾಜ್ಯ ಸರ್ಕಾರ ಅವಸರದ ತೀರ್ಮಾನ ಮಾಡಬಾರದು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಅವರು, ರೇಷನ್ ಕಾರ್ಡ್ ಪರಿಷ್ಕರಣೆ ಮಾಡುವ ಮೊದಲು ರಾಜ್ಯ ಸರ್ಕಾರ ಅವಸರದ ತೀರ್ಮಾನ ಮಾಡಬಾರದು.
ಅರ್ಹ ಫಲಾನುಭವಿಗಳಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಎಲ್ಲಾ ಪಕ್ಷದವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಮೊದಲು 2 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿ, ಅಲ್ಲಿ ಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ನಂತರ ರಾಜ್ಯಾದ್ಯಂತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
WhatsApp ಹೊಸ ವೈಶಿಷ್ಟ್ಯ: ಬಳಕೆದಾರರು ಫುಲ್ ಫಿದಾ – ಏನದು ಅಂತೀರಾ..?
ನಮ್ಮ ಕಾಲದಲ್ಲಿ ತೀರ್ಮಾನ ಮಾಡಿರುವ ವಿಶ್ವ ಬ್ಯಾಂಕಿನಿಂದ 1700 ಕೋಟಿ ರೂ. ಸಾಲ ನೀಡುವ ಯೋಜನೆ ಈಗ ಅಂತಿಮವಾಗಿದೆ. ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳಲು, ದೇವರು ಬಂದರೂ ಇದನ್ನು ಸರಿ ಮಾಡಲು ಸಾಧ್ಯವಿಲ್ಲ ಎಂಬ ಸರ್ಕಾರದ ಧೋರಣೆಯಿದೆ. ಬೆಂಗಳೂರಿನ ವಿಸ್ತರಣೆ ಎಷ್ಟಿದೆ ಅಷ್ಟೇ ಇದೆ. ಈಗಾಗಲೇ ವಲಯಗಳಿಗೊಬ್ಬರು ಮುಖ್ಯ ಇಂಜಿನಿಯರ್ ಇದ್ದಾರೆ.
ಈಗ ಎಲ್ಲ ವಲಯಗಳಿಗೆ ಆಯುಕ್ತರನ್ನು ಮಾಡಲು ಹೊರಟಿದ್ದಾರೆ. ಅದು ಪರಿಹಾರವಲ್ಲ, ಅದರ ಬದಲು ಯೋಜನಾಬದ್ಧವಾಗಿ ಹಣಕಾಸು ಒದಗಿಸಬೇಕು. ನಮ್ಮ ಕಾಲದಲ್ಲಿ 2 ಉಪನಗರಗಳನ್ನು ಮಾಡಲು ಯೋಚಿಸಿದ್ದೇವು. ಅವುಗಳನ್ನು ಮಾಡಿ ಸಂಪರ್ಕ ಕಲ್ಪಿಸಿ, ಅದರ ಬಗ್ಗೆ ಸರ್ಕಾರ ಚಿಂತನೆ ಮಾಡಬೇಕು ಎಂದು ಸಲಹೆ ನೀಡಿದರು.