ಬೆಂಗಳೂರು: ಕರ್ನಾಟಕದ ಸಾರಿಗೆ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮತ್ತು ಚಾಲಕರ ಮುಖಕ್ಕೆ ಮರಾಠಿ ಪುಂಡರು ಮಸಿ ಬಳಿದಿದ್ದರು. ಅಷ್ಟೇ ಅಲ್ಲದೆ, ಹಲ್ಲೆಯನ್ನೂ ಸಹ ನಡೆಸಿದ್ದರು. ಇಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ತಡೆಯಲು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ.
Bank Deposit: ಯಾವೆಲ್ಲಾ ಬ್ಯಾಂಕುಗಳು ಠೇವಣಿ ಮೇಲೆ ಹೆಚ್ಚಿನ ಬಡ್ಡಿ ನೀಡುತ್ತವೆ ಗೊತ್ತಾ..? ಇಲ್ಲಿದೆ ನೋಡಿ
ಬಂದ್ಗೆ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಬೆಂಬಲ ನೀಡಿದ್ದು, ಇದೀಗ ಓಲಾ, ಉಬರ್, ಆಟೋ ಸಂಘಗಳು ಕೂಡ ಬಂದ್ಗೆ ಬೆಂಬಲ ಸೂಚಿಸಿದೆ. ಹೀಗಾಗಿ ನಾಳೆ ಓಲಾ, ಉಬರ್, ಆಟೋಗಳನ್ನು ನಂಬಿ ರಸ್ತೆಗಿಳಿಯುವ ಮುನ್ನ ಜನರು ಯೋಚಿಸುವಂತಾಗಿದೆ.
ಕರ್ನಾಟಕ ಬಂದ್ಗೆ ಸಂಪೂರ್ಣ ಬೆಂಬಲ ಕೊಡುತ್ತೇವೆ. ಹಲ್ಲೆಯಾಗಿರುವುದನ್ನ ನಾವು ಖಂಡಿಸಿ ಬಂದ್ ಮಾಡುತ್ತಿದ್ದೇವೆ. ಇಡಿ ಆಟೋ ರಿಕ್ಷಾ ಸಂಪೂರ್ಣ ಬೆಂಬಲ ಕೊಡುತ್ತೇವೆ ಎಂದು ಆಟೋ ರಿಕ್ಷಾ ಡ್ರೈವರ್ಸ್ ಯೂನಿಯನ್ ಅಧ್ಯಕ್ಷ ಶ್ರೀ ನಿವಾಸ್ ಹೇಳಿದ್ದಾರೆ.
ಏನಿರುತ್ತೆ
- ಆಸ್ಪತ್ರೆ
- ಮೆಡಿಕಲ್
- ಹಾಲು
- ಅಗತ್ಯವಸ್ತುಗಳು
- ಮೆಟ್ರೋ
ಏನಿರಲ್ಲ
- ಓಲಾ, ಉಬರ್, ಆಟೋ
ಯಾರೆಲ್ಲಾ ಬೆಂಬಲ
- ಓಲಾ, ಊಬರ್ ಟ್ಯಾಕ್ಸಿ ಅಸೋಸಿಯೇಷನ್
- ಎರಡು ಆಟೋ ಅಸೋಸಿಯೇಷನ್
- ಎಪಿಎಂಸಿ ಸಂಘಟನೆ ಬೆಂಬಲ
50-50 ಬೆಂಬಲ
- ಕೆಲ ಸಾರಿಗೆ ನೌಕರ ಸಂಘದಿಂದ
- ಸಿನಿಮಾ ಥಿಯೇಟರ್, ಚಲನಚಿತ್ರ ವಾಣಿಜ್ಯ ಮಂಡಳಿ
- ಹೋಟೆಲ್ ಸಂಘಟನೆ
- ಮಾಲ್
- ಬೇಕರಿ
- ಬಾರ್ ಆ್ಯಂಡ್ ರೆಸ್ಟೋರೆಂಟ್
- ಅಂಗಡಿ ಮುಗ್ಗಟ್ಟು
- ಬೀದಿ ಬದಿ ವ್ಯಾಪಾರ