ಗದಗ;- ಟೈರ್ ಬಸ್ಟ್ ಹಿನ್ನೆಲೆ ಲಾರಿ ಹೊತ್ತಿ ಉರಿದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಳ್ಳಿಕೇರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ತಕ್ಷಣ ಕಾರ್ಯಪ್ರವೃತ್ತರಾಗಿ ಸಹಾಯಕ್ಕೆ ಸ್ಥಳೀಯರು ಧಾವಿಸಿದ್ದಾರೆ. ಬೆಂಕಿ ನಂದಿಸೋ ಕಾರ್ಯಕ್ಕೆ ಸ್ಥಳೀಯರು ಮುಂದಾಗಿದ್ದಾರೆ. ಅದೃಷ್ಟವಶಾತ್ ಚಾಲಕ ಬಚಾವ್ ಆಗಿದ್ದು ನಂತರ ಬಂದ ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸೋ ಕಾರ್ಯ ನಡೆದಿದೆ. ಮುಂಡರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.