ಮುಂಬೈ:- ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಏರ್ ಇಂಡಿಯಾ ವಿಮಾನದ ಬಾಗಿಲು ತೆರೆಯಲು ಯತ್ನಿಸಿದ ವ್ಯಕ್ತಿಯನ್ನು ಅರೆಸ್ಟ್ ಮಾಡಲಾಗಿದೆ.
ಅರಿಶಿನ ಹಾಗೂ ಶುಂಠಿ ಜತೆಯಾಗಿ ಸೇವಿಸಿದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
25 ವರ್ಷದ ಯುವಕನನ್ನು ಮುಂಬೈ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ನಿಲ್ದಾಣದಲ್ಲಿ (ಸಿಎಸ್ಎಂಐಎ) ವಿಮಾನ ತುರ್ತು ಭೂಸ್ಪರ್ಶ ಮಾಡಿದ ನಂತರ ಆರೋಪಿ ಅಬ್ದುಲ್ ಮುಸಾವಿರ್ ನಡುಕಂಡಿಯನ್ನು ಬಂಧಿಸಲಾಗಿದೆ ಎಂದು ಸಹರ್ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋಝಿಕ್ಕೋಡ್ನಿಂದ ವಿಮಾನ ಹೊರಡುತ್ತಿದ್ದಂತೆ ಕೇರಳ ಮೂಲದ ಅಬ್ದುಲ್ ತಕ್ಷಣವೇ ವಿಮಾನದ ಹಿಂಭಾಗಕ್ಕೆ ತೆರಳಿದ್ದಾರೆ. ಅಲ್ಲಿ ಅವರು ಕ್ಯಾಬಿನ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ವಿಮಾನದ ಬಾಗಿಲು ತೆರೆಯಲು ಪ್ರಯತ್ನಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಆರೋಪಿ ಅಬ್ದುಲ್ ವಿಮಾನದಲ್ಲಿದ್ದ ಇತರ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾರೆ. ಸಿಬ್ಬಂದಿಯ ಸದಸ್ಯರು ಅವರನ್ನು ವಿಮಾನದ ಸೀಟಿನಲ್ಲಿ ಕೂರಿಸಿ ಸಮಾಧಾನ ಮಾಡಲು ಪ್ರಯತ್ನಿಸಿದ್ದಾರೆ. ಆದರೆ, ಅಲ್ಲಿಯೂ ಸುಮ್ಮನಾಗದ ಅಬ್ದುಲ್ ಅಲ್ಲಿದ್ದ ಇತರ ಪ್ರಯಾಣಿಕರಿಗೆ ಬೈದು, ಗಲಾಟೆ ಮಾಡಿದ್ದಾರೆ ಮತ್ತು ದೈಹಿಕವಾಗಿ ಹಲ್ಲೆ ಮಾಡಲು ಪ್ರಾರಂಭಿಸಿದ್ದಾರೆ. ತುರ್ತು ಬಾಗಿಲು ತೆರೆಯುವುದಾಗಿಯೂ ಬೆದರಿಕೆ ಹಾಕಿದ್ದಾರೆ.